ನವದೆಹಲಿ: ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಮತ್ತು ಜಾರಿ ನಿರ್ದೆಶನಾಲಯ(ಇ.ಡಿ) ಅಧಿಕಾರಿಗಳು ದೇಶದಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಸಂಘಟನೆ ಸೇರಿದಂತೆ ಇತರೆ ಸಂಘಟನೆಗಳು ಮತ್ತು ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಈವರೆಗಿನ ಅತಿದೊಡ್ಡ ತನಿಖೆಯಲ್ಲಿ, ಭಯೋತ್ಪಾದಕರಿಗೆ ಹಣಕಾಸಿನ ನೆರವು, ಭಯೋತ್ಪಾದನೆ ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಘಟನೆಗಳಿಗೆ ಸೇರಲು ಜನರನ್ನು ಪ್ರೇರೇಪಿಸುವುದರಲ್ಲಿ ತೊಡಗಿಸಿಕೊಂಡಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಗಳ ಸ್ಥಳಗಳಲ್ಲಿ ಶೋಧ ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಿಎಫ್ಐನ 100 ಕಾರ್ಯಕರ್ತರನ್ನು ಈವರೆಗೆ ವಿಚಾರಣೆಗೆ ಒಳಪಡಿಸಿದ್ದು, ದಕ್ಷಿಣ ಭಾರತ ಸೇರಿದಂತೆ ದೇಶದ 10 ರಾಜ್ಯಗಳಲ್ಲಿ ಶೋಧ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಪಿಎಫ್ಐನ ರಾಷ್ಟ್ರೀಯ, ರಾಜ್ಯ ಹಾಗೂ ಸ್ಥಳೀಯ ಮುಖಂಡರ ಮನೆಗಳ ಮೇಲೆ ದಾಳಿ ನಡೆಯುತ್ತಿದ್ದು, ರಾಜ್ಯ ಸಮಿತಿ ಕಚೇರಿ ಮೇಲೂ ದಾಳಿ ನಡೆಸಲಾಗುತ್ತಿದೆ’ಎಂದು ಅವರು ಹೇಳಿದ್ದಾರೆ.

‘ತನಿಖಾ ಏಜೆನ್ಸಿಗಳನ್ನು ಬಳಸಿಕೊಳ್ಳುವ ಫ್ಯಾಸಿಸ್ಟ್ ಆಡಳಿತದ ಕ್ರಮಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ’ಎಂದು ಪಿಎಫ್ಐ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.