ನವದೆಹಲಿ: ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ ವ್ಯಾಪಾರಿಯನ್ನು ಹತ್ಯೆ ಮಾಡಿರುವ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಪ್ರಕಟಿಸಿದ್ದ ಆರೋಪದಲ್ಲಿ ಜೂನ್ 21ರಂದು ಅಮರಾವತಿಯಲ್ಲಿ ಔಷಧ ವ್ಯಾಪಾರಿ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ (54) ಎಂಬುವವರನ್ನು ಹತ್ಯೆ ಮಾಡಲಾಗಿತ್ತು.

ನೂಪುರ್ ಶರ್ಮಾ ಪರ ಪೋಸ್ಟ್: ಮಹಾರಾಷ್ಟ್ರದ ಅಮರಾವತಿಯಲ್ಲಿ ಔಷಧ ವ್ಯಾಪಾರಿಯ ಹತ್ಯೆ

ಔಷಧ ವ್ಯಾಪಾರಿ ಉಮೇಶ್ ಪ್ರಹ್ಲಾದ್ ರಾವ್ ಕೊಲ್ಹೆ (54) ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಲಾಗಿದೆ. ಹತ್ಯೆ ಹಿಂದೆ ಅಂತರರಾಷ್ಟ್ರೀಯ ಸಂಘಟನೆಗಳ ಕೈವಾಡ ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಗೃಹ ಸಚಿವರ ಕಾರ್ಯಾಲಯ ಟ್ವೀಟ್ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.