ಪಟ್ನಾ(ಬಿಹಾರ): ರಾಜ್ಯದಲ್ಲಿ ಎಲ್ಲ ಜಾತಿ ಹಾಗೂ ಸಮುದಾಯಗಳ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ತಮ್ಮ ಸರ್ಕಾರ ಕೈಗೊಳ್ಳಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬುಧವಾರ ಖಚಿತಪಡಿಸಿದ್ದಾರೆ.

ದೇಶದಲ್ಲಿ ಜಾತಿ ಆಧಾರಿತ ಗಣತಿ ನಡೆಸಲು ಕೇಂದ್ರ ಸರ್ಕಾರವು ಹಿಂದೇಟು ಹಾಕುತ್ತಿರುವ ನಡುವೆ ಬಿಹಾರ ಸರ್ಕಾರದಿಂದ ಈ ನಡೆ ಕಂಡುಬಂದಿದೆ.

ಇದನ್ನೂ ಓದಿ:ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್ ಗಾಂಧಿಗೆ ಇ.ಡಿ ಸಮನ್ಸ್

ರಾಜ್ಯದಲ್ಲಿ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಜಾತಿ ಸಮೀಕ್ಷೆಗೆ ಎಲ್ಲ ಪಕ್ಷಗಳು ಸರ್ವಾನುಮತದಿಂದ ಬೆಂಬಲ ಸೂಚಿಸಿದ್ದು, ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದು ಹೇಳಿದರು.

ಸರ್ವಪಕ್ಷ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಆರ್‌ಜೆಡಿ ಪಕ್ಷವನ್ನು ಪ್ರತಿನಿಧಿಸಿದರು. ಉಪಮುಖ್ಯಮಂತ್ರಿ, ಬಿಜೆಪಿ ಮುಖಂಡ ತಾರ್‌ಕಿಶೋರ್ ಪ್ರಸಾದ್ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಜೈಸ್ವಾಲ್ ಉಪಸ್ಥಿತರಿದ್ದರು.

ಸಾಮಾಜಿಕ-ಆರ್ಥಿಕ ಸಮೀಕ್ಷೆಗೆ ಭಾರಿ ವೆಚ್ಚ ತಗಲುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬಿಹಾರಕ್ಕೆ ಆರ್ಥಿಕ ನೆರವು ನೀಡುವಂತೆ ತೇಜಸ್ವಿ ಯಾದವ್ ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.