ಕೋಲ್ಕತ್ತ: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆಲ್ಲಲಿದ್ದು, ಭಾರತದಲ್ಲಿ ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿಯಾಗುವ ಸಾಮರ್ಥ್ಯವಿದೆ ಎಂಬ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಪ್ರಧಾನ್, ಜನರು ಎನ್ಡಿಎ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು.

‘ಭಾರತದಲ್ಲಿ ಪ್ರಧಾನಿ ಹುದ್ದೆ ಖಾಲಿ ಇಲ್ಲ. ದೇಶದ ಜನರು ನರೇಂದ್ರ ಮೋದಿ ಮೇಲೆ ನಂಬಿಕೆ ಇಟ್ಟು, ಎರಡು ಸಲ ಅಧಿಕಾರ ನೀಡಿದ್ದಾರೆ. ಈ ಸಲವೂ ನಮ್ಮ ಪಕ್ಷವೇ ಅಧಿಕಾರ ಹಿಡಿಯಲಿದೆ’ ಎಂದರು.

‘ಬಡವರು, ಮಹಿಳೆಯರು, ಯುವಕರು, ಹಿಂದುಳಿದವರು ಮತ್ತು ಗ್ರಾಮೀಣ ಜನರು ಮೋದಿ ಬೆಂಬಲಿಕ್ಕಿದ್ದಾರೆ. 2024ರಲ್ಲಿ ಮೋದಿ ನೇತೃತ್ವದಲ್ಲಿ ಎನ್ಡಿಎ ಮತ್ತೆ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದರು.

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳ ಮಹತ್ವ ದೊಡ್ಡದಿದೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಭಾರತದ ಪ್ರಧಾನಿಯಾಗುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಸೇನ್ ಈ ಹಿಂದೆ ಹೇಳಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.