ನವದೆಹಲಿ (ಪಿಟಿಐ): ‘₹2 ಸಾವಿರ ಮುಖಬೆಲೆಯ ನೋಟುಗಳನ್ನು ಹಂತ ಹಂತವಾಗಿ ರದ್ದುಗೊಳಿಸಬೇಕು. ಅವುಗಳನ್ನು ಹಿಂತಿರುಗಿಸಲು ನಾಗರಿಕರಿಗೆ ಎರಡು ವರ್ಷ ಕಾಲಾವಕಾಶ ನೀಡಬೇಕು’ ಎಂದು ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಅವರು ರಾಜ್ಯಸಭೆಯಲ್ಲಿ ಸೋಮವಾರ ಒತ್ತಾಯಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ‘ದೇಶದ ಬಹುತೇಕ ಎಟಿಎಂಗಳಲ್ಲಿ ₹2 ಸಾವಿರ ಮುಖಬೆಲೆಯ ನೋಟುಗಳು ಲಭ್ಯವಿಲ್ಲ. ಮುಂದಿನ ದಿನಗಳಲ್ಲಿ ಈ ನೋಟುಗಳನ್ನು ಅಮಾನ್ಯೀಕರಿಸಲಾಗುತ್ತದೆ ಎಂಬ ಗಾಳಿ ಸುದ್ದಿ ಕೂಡ ಹಬ್ಬಿದೆ. ಈ ಕುರಿತು ಸರ್ಕಾರವು ಸ್ಪಷ್ಟನೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

‘ಭಾರತೀಯ ರಿಸರ್ವ್ ಬ್ಯಾಂಕ್, ಮೂರು ವರ್ಷಗಳ ಹಿಂದೆಯೇ ₹2 ಸಾವಿರ ಮುಖಬೆಲೆಯ ನೋಟುಗಳ ಮುದ್ರಣ ಸ್ಥಗಿತಗೊಳಿಸಿದೆ. ₹1 ಸಾವಿರ ಮುಖಬೆಲೆಯ ನೋಟುಗಳ ಚಲಾವಣೆ ಸ್ಥಗಿತವಾಗಿದ್ದ ಸಂದರ್ಭದಲ್ಲೇ ₹2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿದ್ದರ ಹಿಂದಿನ ಉದ್ದೇಶವೇ ಅರ್ಥವಾಗುತ್ತಿಲ್ಲ’ ಎಂದು ಹೇಳಿದ್ದಾರೆ.

‘₹2 ಸಾವಿರ ಮುಖಬೆಲೆಯ ನೋಟುಗಳನ್ನು ಸಂಗ್ರಹಿಸಿಡಲಾಗುತ್ತಿದೆ.ಡ್ರಗ್ಸ್ ಸೇರಿದಂತೆ ಇತರ ಅಕ್ರಮ ವ್ಯವಹಾರಗಳಿಗೆ ಇದನ್ನು ಬಳಸಲಾಗುತ್ತಿದೆ. ಹಣ ಅಕ್ರಮ ವರ್ಗಾವಣೆಯಲ್ಲೂ ಇದರ ಬಳಕೆ ಹೆಚ್ಚಿದೆ’ ಎಂದಿದ್ದಾರೆ.

ಸಾಲ ನೀಡುವ ಮೊಬೈಲ್ ಆಧಾರಿತ ಆ್ಯಪ್‌ಗಳನ್ನು ನಿಷೇಧಿಸಬೇಕು ಎಂದು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸಂಸದ ವಿ.ವಿಜಯ್‌ಸಾಯಿ ರೆಡ್ಡಿ ಒತ್ತಾಯಿಸಿದ್ದಾರೆ.

‘ಇಂತಹ ಬಹುಪಾಲು ಆ್ಯಪ್‌ಗಳು ಚೀನಾದಿಂದ ಕಾರ್ಯಾಚರಣೆ ನಡೆಸುತ್ತಿದ್ದು, ಬಳಕೆದಾರರ ಮೊಬೈಲ್‌ನಲ್ಲಿನ ಅತಿ ಸೂಕ್ಷ್ಮ ಹಾಗೂ ಖಾಸಗಿ ಮಾಹಿತಿ ಕದಿಯುವ ಸಾಧ್ಯತೆ ಇದೆ. ಹೀಗಾಗಿ ಕೇಂದ್ರ ಸರ್ಕಾರ ಇವುಗಳನ್ನು ನಿಷೇಧಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.