ನವದೆಹಲಿ: ಒಮ್ಮೆ ಮಾತ್ರ ಬಳಸಬಹುದಾದ ಪ್ಲಾಸ್ಟಿಕ್‌ನ ಬಳಕೆ ನಿಲ್ಲಿಸುವುದಕ್ಕೆ ಭಾರತ ಬದ್ಧವಾಗಿದೆ. ಈ ಸಂಬಂಧ ಜಾಗತಿಕ ಮಟ್ಟದಲ್ಲಿ ಕಾರ್ಯಕ್ರಮ ಆರಂಭಿಸಲು ಫ್ರಾನ್ಸ್‌ನೊಂದಿಗೆ ಭಾರತ ಕೈಜೋಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದರು.

‘ಒನ್ ನೇಷನ್ ಶೃಂಗಸಭೆ’ ಹಿನ್ನೆಲೆಯಲ್ಲಿ ಅವರು ಬಿಡುಗಡೆ ಮಾಡಿರುವ ವಿಡಿಯೊ ಸಂದೇಶದಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ.

ವಿಶ್ವಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಸಹಯೋಗದಲ್ಲಿ ಫ್ರಾನ್ಸ್ ಈ ಶೃಂಗಸಭೆಯನ್ನು ಆಯೋಜಿಸಿದೆ.

ಏಕರೂಪದ ನಾಗರಿಕ ಸಂಹಿತೆ ಈ ಹೊತ್ತಿನ ಅಗತ್ಯ: ಕೇಂದ್ರ ಸಚಿವ ಗಿರಿರಾಜ್ ಸಿಂಗ್

‘ದೇಶದ ಕರಾವಳಿಯಲ್ಲಿನ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸಲು ಇತ್ತೀಚೆಗೆ ಬೃಹತ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೂರು ಲಕ್ಷ ಯುವಕ–ಯುವತಿಯರು ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ 13 ಟನ್‌ಗೂ ಅಧಿಕ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಲಾಯಿತು’ ಎಂದು ಅವರು ಹೇಳಿದ್ದಾರೆ.

‘ಸಮುದ್ರದಲ್ಲಿನ ಪ್ಲಾಸ್ಟಿಕ್ ತ್ಯಾಜ್ಯ ತೆರವುಗೊಳಿಸುವ ಸಲುವಾಗಿ 100 ನೌಕಾ ದಿನಗಳನ್ನು ಒದಗಿಸುವಂತೆ ನೌಕಾಪಡೆಗೆ ನಿರ್ದೇಶನ ನೀಡಲಾಗಿದೆ’ ಎಂದೂ ಅವರು ಹೇಳಿದ್ದಾರೆ.

ಕರ್ನಾಟಕದ ಸಚಿವ ಕೆ.ಎಸ್.ಈಶ್ವರಪ್ಪ ದೇಶದ್ರೋಹಿ: ಜೆಡಿಯು ನಾಯಕ ಉಪೇಂದ್ರ ಕುಶ್ವಾಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.