ನವದೆಹಲಿ: ಮೇ 26ರಂದು ‘ಯಾಸ್’ ಚಂಡಮಾರುತವು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದುಹೋಗಲಿದ್ದು, ಆ ರಾಜ್ಯಗಳಲ್ಲಿ ಕೈಗೊಂಡಿರುವ ಪೂರ್ವ ಸಿದ್ಧತೆ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು, ದೂರ ಸಂಪರ್ಕ, ವಿದ್ಯುತ್, ನಾಗರಿಕ ವಿಮಾನಯಾನ, ಭೂ ವಿಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.

ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ಸಚಿವರು ಕೂಡ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಯಾಸ್’ ಚಂಡಮಾರುತವು ಭಾರಿ ಬಿರುಗಾಳಿಯ ಸ್ವರೂಪ ಪಡೆದು ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದುಹೋಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ.

ಪೂರ್ವ- ಮಧ್ಯ ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೇಲೆ ಶನಿವಾರ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದೆ. ಇದು ತೀವ್ರ ಸ್ವರೂಪದ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ... ಮೇ 26ಕ್ಕೆ ಯಾಸ್ ಚಂಡಮಾರುತ: ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಕಟ್ಟೆಚ್ಚರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.