ನವದೆಹಲಿ: ದೇಶದಲ್ಲಿ ನಡೆಯುತ್ತಿರುವ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ವೇಗ ನೀಡಲು ಈ ಅಭಿಯಾನದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಇತರ ಸಂಘಟನೆಗಳನ್ನು ತೊಡಗಿಸಿಕೊಳ್ಳುವುದು ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.

ಅವರು ಕೋವಿಡ್ ಲಸಿಕೆ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದರು.

‘ಈಗ ನಡೆಯುತ್ತಿರುವ ಲಸಿಕೆ ಕಾರ್ಯಕ್ರಮದ ವೇಗ ಕುಂಠಿತಗೊಳ್ಳದಂತೆ ನೋಡಿಕೊಳ್ಳುವುದು ಮುಖ್ಯ. ಅದೇ ರೀತಿ ಕೋವಿಡ್–19 ಪರೀಕ್ಷೆಗಳು ಕಡಿಮೆಯಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ರಾಜ್ಯಗಳೊಂದಿಗೆ ಸಮನ್ವಯ ಸಾಧಿಸಿ, ಖಾತ್ರಿಪಡಿಸಿಕೊಳ್ಳಬೇಕು’ ಎಂದು ಸೂಚಿಸಿದರು.

‘ಲಸಿಕೆ ಕಾರ್ಯಕ್ರಮಕ್ಕೆ ಇನ್ನಷ್ಟು ವೇಗ ನೀಡುವ ಸಲುವಾಗಿ ನವೀನ ವಿಧಾನಗಳನ್ನು ಅನುಸರಿಸಲಾಗುತ್ತಿದೆ ಎಂಬುದಾಗಿ ಅಧಿಕಾರಿಗಳು ಪ್ರಧಾನಿಯವರಿಗೆ ವಿವರಿಸಿದರು’ ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.