ನವದೆಹಲಿ: ಮಾತೃಸಂಸ್ಥೆ ಫೇಸ್ಬುಕ್ ಜೊತೆ ಬಳಕೆದಾರರ ದತ್ತಾಂಶ ಮತ್ತು ಮಾಹಿತಿ ಹಂಚಿಕೊಳ್ಳುವ ವಾಟ್ಸ್ಆ್ಯಪ್ನ ನೀತಿಯನ್ನು ಪ್ರಶ್ನಿಸಿ ಇಬ್ಬರು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯ ಅಂತಿಮ ವಿಚಾರಣೆಯನ್ನು 2023ರ ಜನವರಿ 17ರಂದು ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಗುರುವಾರ ಹೇಳಿದೆ.

‘ಈ ವಿಷಯಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 15ರ ಒಳಗಾಗಿ ತಮ್ಮ ವಾದ ಮಂಡನೆಯನ್ನು ಪೂರ್ಣಗೊಳಿಸಬೇಕು’ ಎಂದು ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು ಎಲ್ಲ ಕಕ್ಷಿದಾರರಿಗೆ ಸೂಚಿಸಿತು.

ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ, ಅನಿರುದ್ಧ ಬೋಸ್, ಹೃಷಿಕೇಶ ರಾಯ್ ಹಾಗೂ ಸಿ.ಟಿ.ರವಿಕುಮಾರ್ ಈ ಪೀಠದಲ್ಲಿದ್ದಾರೆ.

ಬಳಕೆದಾರರ ದತ್ತಾಂಶ ಮತ್ತು ಮಾಹಿತಿ ಹಂಚಿಕೊಳ್ಳುವ ವಾಟ್ಸ್ಆ್ಯಪ್ನ ನೀತಿಯು ಖಾಸಗಿತನ ಹಾಗೂ ವಾಕ್ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ ಎಂದು ದೂರಿ ವಿದ್ಯಾರ್ಥಿಗಳಾದ ಕರ್ಮಣ್ಯಸಿಂಗ್ ಸರೀನ್ ಹಾಗೂ ಶ್ರೇಯಾ ಸೇಠಿ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.