LIVE| ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ: ಸಿಎಂ ನಾರಾಯಣಸ್ವಾಮಿ ರಾಜೀನಾಮೆ
LIVE
ವಿ. ನಾರಾಯಣಸ್ವಾಮಿ ನೇತೃತ್ವದ ಪುದುಚೇರಿ ಕಾಂಗ್ರೆಸ್ ಸರ್ಕಾರ ಸಂಕಷ್ಟಕ್ಕೆ ಸಿಲುಕಿದೆ. ಬಹುಮತ ಸಾಬೀತುಪಡಿಸುವ ಸಂದಿಗ್ಧ ಪರಿಸ್ಥಿತಿಯಲ್ಲಿರುವ ನಾರಾಯಣಸ್ವಾಮಿ ಅವರಿಗೆ ಕಾಂಗ್ರೆಸ್–ಡಿಎಂಕೆ ಮೈತ್ರಿಕೂಟದ ಇಬ್ಬರು ಶಾಸಕರು ಭಾನುವಾರ ರಾಜೀನಾಮೆ ನೀಡಿದ್ದು ನುಂಗಲಾಗದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ಸರ್ಕಾರ ಉಳಿಸಿಕೊಳ್ಳುವ ಸವಾಲು ಮತ್ತಷ್ಟು ಪ್ರಯಾಸವಾಗಲಿದೆ. ಕಾಂಗ್ರೆಸ್‌ನ ಕೆ. ಲಕ್ಷ್ಮೀನಾರಾಯಣನ್ ಮತ್ತು ಡಿಎಂಕೆಗೆ ಸೇರಿದ ವೆಂಕಟೇಶನ್ ರಾಜೀನಾಮೆ ನೀಡಿರುವ ಶಾಸಕರು. ಇಬ್ಬರ ರಾಜೀನಾಮೆಯಿಂದಾಗಿ, 33 ಸದಸ್ಯರನ್ನೊಳಗೊಂಡ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್–ಡಿಎಂಕೆ ಮೈತ್ರಿಕೂಟದ ಶಾಸಕರ ಸಂಖ್ಯೆ 11ಕ್ಕೆ ಕುಸಿದಿದೆ. ಆದರೆ, ವಿರೋಧ ಪಕ್ಷ 14 ಶಾಸಕರನ್ನು ಹೊಂದಿದೆ. ಏಳು ಸ್ಥಾನಗಳು ಖಾಲಿ ಉಳಿದಿವೆ. ಮಾಜಿ ಸಚಿವರಾದ ಎ.ನಮಶಿವಾಯಂ ಮತ್ತು ಮಲ್ಲಾಡಿ ಕೃಷ್ಣರಾವ್ ಸೇರಿದಂತೆ ನಾಲ್ವರು ಕಾಂಗ್ರೆಸ್ ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ನಮಶಿವಯಂ ಈಗಾಗಲೇ ಬಿಜೆಪಿ ಸೇರಿದ್ದಾರೆ. ಮತ್ತೊಬ್ಬ ಶಾಸಕರನ್ನು ಈ ಮೊದಲೇ ಅನರ್ಹಗೊಳಿಸಲಾಗಿತ್ತು.
#BreakingNews Congress Government in #Puducherry falls after Chief Minister V Narayanasamy and ruling party MLAs walk out of the Assembly. @DeccanHerald
\r\n\u2014 Sivapriyan E.T.B | \u0b9a\u0bbf\u0bb5\u0baa\u0bcd\u0baa\u0bbf\u0bb0\u0bbf\u0baf\u0ba9\u0bcd \u0b8f.\u0ba4\u0bbf.\u0baa (@sivaetb) February 22, 2021
05:2622 Feb 2021
ಸರ್ಕಾರಕ್ಕೆ ಜನಾಭಿಪ್ರಾಯವಿದೆ: ಸಿಎಂ
We formed the government with the support of DMK and independent MLAs. After that, we faced various elections. We have won all the by-elections. It is clear that people of Puducherry trust us: Puducherry CM V.Narayanasamy in assembly pic.twitter.com/mrnsN2xxFh