ಸೂರತ್: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್‌ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ತೀರ್ಪು ನೀಡಿದೆ.

2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದ ರ‍್ಯಾಲಿಯಲ್ಲಿ ‘ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ’ ಎಂದು ರಾಹುಲ್ ವ್ಯಂಗ್ಯವಾಡಿದ್ದರು. ಈ ಸಂಬಂಧ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರಿನ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಂಡ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.

ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡೂ ಕಡೆಯವರ ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ಎಚ್‌ಎಚ್ ವರ್ಮಾ, ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಬಳಿಕ ಜಾಮೀನು ಮಂಜೂರು ಮಾಡಿ, 30 ದಿನಗಳ ಕಾಲ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶ ನೀಡಿದರು.

ಭಾರತೀಯ ದಂಡ ಸಂಹಿತೆ ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯ ಅನುಮತಿ ನೀಡಿದೆ ಎಂದು ಕಾಂಗ್ರೆಸ್ ಮುಖಂಡ ಮತ್ತು ನ್ಯಾಯವಾದಿ ಬಾಬು ಮಂಗುಕೀಯ ಹೇಳಿದ್ದಾರೆ. ತೀರ್ಪಿನ ವೇಳೆ ರಾಹುಲ್ ಗಾಂಧಿ ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.