ನವದೆಹಲಿ: ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೆ, ರೈಲ್ವೆಯು ಪ್ರಯಾಣ ದರದಲ್ಲಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿದ್ದ ರಿಯಾಯಿತಿಗಳನ್ನು ಪುನಃ ಆರಂಭಿಸಲು ಚಿಂತನೆ ನಡೆಸಿದೆ. ಕೆಲ ನಿಬಂಧನೆಗಳಿಗೆ ಒಳಪಟ್ಟು ಈ ಸೌಲಭ್ಯಗಳನ್ನು ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಈ ರಿಯಾಯಿತಿಗಳು ಜನರಲ್ ಹಾಗೂ ಸ್ಲೀಪರ್ ಕೋಚ್‌ಗಳಲ್ಲಿನ ಪ್ರಯಾಣಕ್ಕೆ ಮಾತ್ರ ಅನ್ವಯವಾಗಲಿದೆ ಎಂದು ಹೇಳಿವೆ.

ಈ ಮೊದಲು 58 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ 60 ವರ್ಷ ದಾಟಿದ ಪುರುಷರಿಗೆ ರಿಯಾಯಿತಿ ದರಗಳು ಅನ್ವಯವಾಗುತ್ತಿದ್ದವು. ಈಗ ಈ ರಿಯಾಯಿತಿ ಸೌಲಭ್ಯವನ್ನು 70 ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡುವ ಪ್ರಸ್ತಾವ ಇದೆ ಎಂದು ಇವೇ ಮೂಲಗಳು ಹೇಳಿವೆ.

‘ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿನ ರಿಯಾಯಿತಿಯನ್ನು ಮುಂದುವರಿಸುವುದು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಮತ್ತೆ ಆರಂಭಿಸುವುದಕ್ಕೆ ಸಂಬಂಧಿಸಿ ನಮ್ಮ ಮುಂದಿರುವ ಆಯ್ಕೆಗಳಿವು. ಆದರೆ, ಈ ನಿಟ್ಟಿನಲ್ಲಿ ಯಾವುದೇ ಅಂತಿಮ ನಿರ್ಧಾರವಾಗಿಲ್ಲ’ ಎಂದು ಸ್ಪಷ್ಟಪಡಿಸಿವೆ.

ಮುಸ್ಲಿಮರ ಮೇಲೆ ಹೂಮಳೆಗರೆಯುವುದಿಲ್ಲ; ಅವರ ಮನೆಗಳನ್ನು ನೆಲಸಮ ಮಾಡುತ್ತಾರೆ: ಓವೈಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.