ನವದೆಹಲಿ: ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 25 ಸಾವಿರ ಕಿ.ಮೀ. ಉದ್ದದಷ್ಟು ರಾಷ್ಟ್ರೀಯ ಹೆದ್ದಾರಿಗುಂಟ ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್‌ಸಿ) ಮೂಲಸೌಕರ್ಯ ಅಭಿವೃದ್ಧಿಪಡಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಯೋಜನೆ ರೂಪಿಸಿದೆ.

₹ 6 ಸಾವಿರ ಕೋಟಿಗೂ ಅಧಿಕ ವೆಚ್ಚದ ಈ ಯೋಜನೆಗೆ ಸಚಿವಾಲಯವು ಟೆಂಡರ್ ಆಹ್ವಾನಿಸಿದೆ. ಪ್ರಾಯೋಗಿಕವಾಗಿ ಹೈದರಾಬಾದ್–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ದೆಹಲಿ–ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ₹ 500 ಕೋಟಿ ವೆಚ್ಚದಲ್ಲಿ ಒಎಫ್‌ಸಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಬ್ರಾಡ್‌ಬ್ಯಾಂಡ್ ಕಾರ್ಯಕ್ರಮದ ಅಂಗವಾಗಿ ಈ ಬೃಹತ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಬರುವ ದಿನಗಳಲ್ಲಿ ದೇಶದಲ್ಲಿ 5ಜಿ ಸೇವೆ ಹೆಚ್ಚು ಬಳಕೆಯಾಗುವ ನಿರೀಕ್ಷೆ ಇದ್ದು, ಒಎಫ್‌ಸಿ ಅಳವಡಿಕೆ ಇದಕ್ಕೆ ಪೂರಕವಾಗಿರಲಿದೆ ಎಂದು ಸಚಿವಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.