ನವದೆಹಲಿ: ‘ತಮ್ಮ ಬಣವನ್ನೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ ಶಿಂದೆಬಣ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿದಂತೆ ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳಬಾರದು’ ಎಂದು ಸುಪ್ರೀಂ ಕೋರ್ಟ್ ಗುರುವಾರ ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಬಿಲ್ಲು ಮತ್ತು ಬಾಣ ಶಿವಸೇನಾದ ಚುನಾವಣಾ ಗುರುತಾಗಿದೆ.

ಶಿಂದೆ ಬಣದ ಅರ್ಜಿಯ ಕುರಿತ ನೋಟಿಸ್ಗೆ ಉತ್ತರಿಸಲು ಉದ್ಧವ್ ಠಾಕ್ರೆ ನೇತೃತ್ವದ ಬಣವು ಸಮಯ ಕೋರಿದರೆ, ಆ ಮನವಿಯನ್ನು ಪರಿಗಣಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ತಿಳಿಸಿತು.

ಮಹಾರಾಷ್ಟ್ರದ ಇತ್ತೀಚಿನ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದ ಪ್ರಕರಣಗಳನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುವ ಕುರಿತು ಸೋಮವಾರದೊಳಗೆ ಆದೇಶ ನೀಡಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠ ತಿಳಿಸಿತು.

‘ಈ ವಿಷಯವನ್ನು 5 ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೆ ಎಂಬುದರ ಬಗ್ಗೆ ನಾವು ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೂ ಒಳಗೊಂಡ ಪೀಠ ಹೇಳಿದೆ.

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಶಿವಸೇನಾ ಮತ್ತು ಅದರ ಬಂಡಾಯ ಶಾಸಕರು ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ವಿಭಜನೆ, ರಾಜಕೀಯ ಪಕ್ಷಗಳ ವಿಲೀನ, ಪಕ್ಷಾಂತರ ಮತ್ತು ಅನರ್ಹತೆಗಳಿಗೆ ಸಂಬಂಧಿಸಿದ ಸಾಂವಿಧಾನಿಕ ಸಮಸ್ಯೆಗಳನ್ನು ಈ ಅರ್ಜಿಗಳು ಒಳಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.