ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ತಮ್ಮ ವಿವಾಹವನ್ನು ಅಂಗೀಕರಿಸುವಂತೆ ನಿರ್ದೇಶನ ಕೋರಿ ಸಲಿಂಗ ದಂಪತಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರಿಗೆ ನೋಟಿಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ನೋಟಿಸ್ ಜಾರಿ ಮಾಡುವ ಮುನ್ನ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಅವರಿಂದ ಅಹವಾಲನ್ನು ಆಲಿಸಿತು.

‘ಈ ನೋಟಿಸ್‌ಗೆ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.

ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ಜೋಡಿಗಳ ವಿವಾಹವನ್ನು ಮಾನ್ಯ ಮಾಡುವಂತೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್‌ಗೆ ಹಲವು ಅರ್ಜಿಗಳು ಬಂದಿವೆ. ಅದರಲ್ಲಿ ಒಂದು ಮನವಿಯನ್ನು ಹೈದರಾಬಾದ್‌ನ ನಿವಾಸಿಗಳಾದ ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್ ದಂಗ್ ಎಂಬ ಸಲಿಂಗ ದಂಪತಿ ಸಲ್ಲಿಸಿದ್ದು, ಎರಡನೇ ಮನವಿಯನ್ನುಪಾರ್ಥ್ ಫಿರೋಜ್ ಮೆಹ್‌ರೋತ್ರಾ ಮತ್ತು ಉದಯ್ ರಾಜ್ ಎಂಬ ಸಲಿಂಗ ದಂಪತಿ ಸಲ್ಲಿಸಿದ್ದಾರೆ.

ತಮ್ಮ ಇಚ್ಛೆಯ ವ್ಯಕ್ತಿಯನ್ನು ಮದುವೆಯಾಗುವ ಸ್ವಾತಂತ್ರ್ಯದ ಹಕ್ಕನ್ನು ಎಲ್‌ಜಿಬಿಟಿಕ್ಯೂ ಸಮುದಾಯಕ್ಕೆ ಸೇರಿದ ವ್ಯಕ್ತಿಗಳಿಗೂ ವಿಸ್ತರಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸಲಿಂಗ ವಿವಾಹಗಳಿಗೆ ಮಾನ್ಯತೆ ನೀಡದಿರುವುದು ಸಂವಿಧಾನದ 14 ಮತ್ತು 21ನೇ ವಿಧಿಯ ಅಡಿಯಲ್ಲಿ ಸಮಾನತೆ ಮತ್ತು ಬದುಕುವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದೂ ಅರ್ಜಿದಾರರು ಪ್ರತಿಪಾದಿಸಿದ್ದಾರೆ.

2018ರಲ್ಲಿ ಐತಿಹಾಸಿಕ ತೀರ್ಪು ನೀಡಿದ್ದ ಸಂವಿಧಾನ ಪೀಠ, ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಅನೈಸರ್ಗಿಕ ಲೈಂಗಿಕತೆ ಅಪರಾಧ ಎಂದು ಹೇಳಿದ್ದ 158 ವರ್ಷಗಳ ಬ್ರಿಟಿಷ್ ಕಾನೂನನ್ನು ರದ್ದುಪಡಿಸಿತ್ತು ಹಾಗೂ ಇಂತಹ ಸಂಬಂಧ ಅಪರಾಧವಾಗುವುದಿಲ್ಲ ಎಂದು ಒಮ್ಮತದ ತೀರ್ಪು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.