ನವದೆಹಲಿ: ದೆಹಲಿ ಅಬಕಾರಿ ನೀತಿ ಜಾರಿ ಪ್ರಕರಣದಲ್ಲಿ ಬಂಧಿತ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಮಧ್ಯಾಹ್ನ ರೂಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು,10 ದಿನಗಳ ಕಾಲ ತನ್ನ ಸುಪರ್ದಿಗೆ ಒಪ್ಪಿಸುವಂತೆ ಕೋರಲು ಸಿದ್ಧವಾಗಿದೆ.

ಗುರುವಾರ, ಇಡಿ ಸಿಸೋಡಿಯಾ ಅವರನ್ನು ಸುಮಾರು ಎಂಟು ಗಂಟೆಗಳ ಕಾಲ ವಿಚಾರಣೆ ನಡೆಸಿ, ನಂತರ ತಿಹಾರ್ ಜೈಲಿನಲ್ಲಿ ಬಂಧಿಸಿತು. ಪ್ರಕರಣದ ಹೆಚ್ಚಿನ ತನಿಖೆಗಾಗಿ ಇಡಿ ಈಗ ಅವರನ್ನು ಹತ್ತು ದಿನಗಳ ತನ್ನ ಸುಪರ್ದಿಗೆ ನೀಡುವಂತೆ ನ್ಯಾಯಾಲಯದಲ್ಲಿ ಕೋರುವ ಸಾಧ್ಯತೆಯಿದೆ.

ಎಎಪಿ ಪಕ್ಷ/ನಾಯಕರು ಸೌತ್ ಗ್ರೂಪ್‌ನಿಂದ ₹100 ಕೋಟಿ ಕಿಕ್‌ಬ್ಯಾಕ್ ಪಡೆದಿರುವ ಕುರಿತು ಇಡಿ ಸಿಸೋಡಿಯಾ ಅವರನ್ನು ಪ್ರಶ್ನಿಸಿದೆ ಎಂದು ಮೂಲಗಳು ಹೇಳಿವೆ.

ಪ್ರಕರಣದಲ್ಲಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ಪಿಳ್ಳೈ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರ ಪಾತ್ರದ ಬಗ್ಗೆಯೂ ಪ್ರಶ್ನಿಸಲಾಗಿದೆ.

ಫೆಬ್ರುವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತ್ತು. ಮಾರ್ಚ್ 6 ರಂದು ರೂಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತ್ತು. ಅವರ ಜಾಮೀನು ಅರ್ಜಿಯು ನ್ಯಾಯಾಲಯದ ಮುಂದೆ ವಿಚಾರಣೆಗೆ ಬಾಕಿಯಿದ್ದು, ಇಂದು ವಿಚಾರಣೆಗೆ ಬರುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.