ನವದೆಹಲಿ:ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜೂನ್ 8ರಂದು ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಗುರುವಾರ ಖಚಿತಪಡಿಸಿದ್ದಾರೆ.

ಸೋನಿಯಾ ಗಾಂಧಿ ಅವರಿಗೆ ಗುರುವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವಿಚಾರಣೆಯ ವೇಳೆ ಚೇತರಿಸಿಕೊಳ್ಳುವ ನಿರೀಕ್ಷೆ ಇದೆ ಎಂದು ಸುರ್ಜೆವಾಲಾ ಹೇಳಿದ್ದಾರೆ.

ಇದನ್ನೂ ಓದಿ:ರಾಜ್ಯಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸಲು ಕೇಂದ್ರದ ಹುನ್ನಾರ: ಕೆಸಿಆರ್ ಆರೋಪ

ಸೋನಿಯಾ ಗಾಂಧಿಗೆ ಜ್ವರ ಕಾಣಿಸಿಕೊಂಡಿದ್ದು, ಸದ್ಯ ಅವರು ಪ್ರತ್ಯೇಕವಾಸದಲ್ಲಿದ್ದಾರೆ ಎಂದು ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಸಮನ್ಸ್ ಜಾರಿ ಮಾಡಿತ್ತು.

ಸೋನಿಯಾ ಗಾಂಧಿಗೆ ಜೂನ್ 8ರಂದು ಹಾಗೂ ರಾಹುಲ್ ಗಾಂಧಿಗೆ ಜೂನ್ 2ರಂದು ಹಾಜರಾಗುವಂತೆ ಇ.ಡಿ. ಸೂಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.