ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಬಂಧಿಸಿರುವ ಸಿಬಿಐ ನಡೆ ಪ್ರಶ್ನಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಮನವಿ ಮಾಡುವಂತೆ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

ತುರ್ತು ವಿಚಾರಣೆ ನಡೆಸುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಅವರ ಪೀಠದ ಎದುರು ಹಿರಿಯ ವಕೀಲ ಎ.ಎಂ. ಸಿಂಘ್ವಿ ಮನವಿ ಮಾಡಿದ್ದರು.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 482ರ ಅಡಿಯಲ್ಲಿ ಅರ್ಜಿದಾರರು ಹೈಕೋರ್ಟ್‌ಗೆ ಹೋಗಬಹುದು ಎಂದು ನ್ಯಾಯಾಲಯವು ಆರಂಭದಲ್ಲಿ ಸೂಚಿಸಿತ್ತು. ಆದರೆ, ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಯು ವಿನೋದ್ ದುವಾ ಪ್ರಕರಣದ ತೀರ್ಪಿನ ಅಡಿಯಲ್ಲಿ ಬರುತ್ತದೆ ಎಂದು ವಕೀಲರು ನ್ಯಾಯಾಲಯದ ಗಮನ ಸೆಳೆದಿದ್ದರು.

ಫೆಬ್ರುವರಿ 26ರಂದು ಸಿಸೋಡಿಯಾ ಅವರನ್ನು 8 ಗಂಟೆಗಳ ವಿಚಾರಣೆ ಬಳಿಕ ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.ನಿನ್ನೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಕೆ.ನಾಗ್ಪಾಲ್, ಸಿಸೋಡಿಯಾ ಅವರನ್ನು 5 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದ್ದರು.

ಇವನ್ನೂ ಓದಿ..

ದೆಹಲಿ ಅಬಕಾರಿ ನೀತಿ ಹಗರಣ| ಸಿಸೋಡಿಯಾ ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ

ಸಿಬಿಐ ಅಧಿಕಾರಿಗಳೇ ಸಿಸೋಡಿಯಾ ಬಂಧನದ ವಿರುದ್ಧವಾಗಿದ್ದಾರೆ: ಕೇಜ್ರಿವಾಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.