ಚೆನ್ನೈ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ತಮಿಳುನಾಡಿನ ಅರಾವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸೋಲುಗಳು ಜೀವನದ ಒಂದು ಭಾಗವಾಗಿದ್ದು, ಇಂತಹ ಹಲವು ಸೋಲುಗಳನ್ನು ನೋಡಿದ್ದೇನೆ. ಗೆಲುವಿನ ನಿರೀಕ್ಷೆ ಇತ್ತು. ಆದರೆ, ಅದು ಸಾಧ್ಯವಾಗಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ನನಗೆ 68 ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡಿದ ಮತದಾರರಿಗೆ ನನ್ನ ಧನ್ಯವಾದಗಳು ಎಂದಿದ್ದಾರೆ.

ನನ್ನ ಪರವಾಗಿ ಶ್ರಮಿಸಿದ ಪಕ್ಷದ ಹಿರಿಯರಿಗೂ, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುವುದಾಗಿ ಅಣ್ಣಾಮಲೈ ತಿಳಿಸಿದ್ದಾರೆ.

ಐಪಿಎಸ್ಗೆ ರಾಜೀನಾಮೆ ನೀಡಿದ ಬಳಿಕ ಕರೂರು ಜಿಲ್ಲೆಯ ತಮ್ಮ ಹುಟ್ಟೂರಲ್ಲಿ ನೆಲೆಯಾದ ಅಣ್ಣಾಮಲೈ ಅವರು ವಿದ್ಯಾರ್ಥಿಗಳಿಗೆ ನೆರವಾಗುವುದಕ್ಕಾಗಿ ಪ್ರತಿಷ್ಠಾನವೊಂದನ್ನು ಆರಂಭಿಸಿದ್ದರು. ಅವರು ಸ್ಪರ್ಧಿಸಿರುವ ಅರವಿಕುರಿಚಿ ಕ್ಷೇತ್ರದಲ್ಲಿ ಬಿಜೆಪಿಗೆ ನೆಲೆಯೇನೂ ಇರಲ್ಲಿಲ್ಲ. ಮತ ಸೆಳೆಯಲು ಮಿತ್ರಪಕ್ಷ ಎಐಎಡಿಎಂಕೆಯ ಮೇಲೆಯೇ ಅವಲಂಬಿತರಾಗಿದ್ದರು. ಜತೆಗೆ, ಪ್ರತಿಸ್ಪರ್ಧಿಗಳು ಪ್ರಭಾವಿಗಳಾಗಿರುವುದರಿಂದ ಅಣ್ಣಾಮಲೈ ಮುಂದೆ ದೊಡ್ಡ ಸವಾಲೇ ಇತ್ತು.

ಇದನ್ನೂ ಓದಿ... ಶಿಷ್ಯ ಸುವೇಂದು ಅಧಿಕಾರಿ ಎದುರು 1,956 ಮತಗಳ ಅಂತರದಿಂದ ಸೋತ ಮಮತಾ ಬ್ಯಾನರ್ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.