ನಾಗಪುರ: ಜನರಲ್ಲಿ ಭಯ ಮೂಡಿಸುವುದಕ್ಕಾಗಿ ಉಗ್ರರು ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಡೆಸುವುದನ್ನು, ಹತ್ಯೆ ಮಾಡುವುದನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಶುಕ್ರವಾರ ಹೇಳಿದರು.

ಇಲ್ಲಿನ ರೇಷಿಂಬಾಗ್ ಮೈದಾನದಲ್ಲಿ ವಿಜಯದಶಮಿಯ ವಾರ್ಷಿಕ ಆಚರಣೆಯಲ್ಲಿ ಪಾಲ್ಗೊಂಡಿದ್ದ ಅವರು, ಗಡಿಯಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜಿಸಿ ಅವರು ಸದಾ ಸನ್ನದ್ಧರಾಗಿರುವಂತೆ ನೋಡಿಕೊಳ್ಳುವ ಅಗತ್ಯವಿದೆ ಎಂದರು.

ಓದಿ:ಸಾವರ್ಕರ್ ಟೀಕಾಕಾರರ ಮುಂದಿನ ಗುರಿ ಸ್ವಾಮಿ ವಿವೇಕಾನಂದ: ಮೋಹನ್ ಭಾಗವತ್

ಬಿಟ್ ಕಾಯಿನ್ ಮತ್ತು ಒಟಿಟಿ ವೇದಿಕೆ ಕುರಿತು ಪ್ರಸ್ತಾಪಿಸಿದ ಅವರು ಇವುಗಳ ಮೇಲೆ ನಿಯಂತ್ರಣ ಹೇರಲು ಸರ್ಕಾರ ಪ್ರಯತ್ನಿಸಬೇಕು ಎಂದೂ ಸಲಹೆ ನೀಡಿದರು.

ಅ. 12ರಂದು ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.