ನವದೆಹಲಿ: ‘ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವ ಮೂಲಕ ನಿಯಮ ಉಲ್ಲಂಘಿಸಿದಕ್ಕಾಗಿ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಖಾತೆಗಳನ್ನು ಲಾಕ್ ಮಾಡಲಾಗಿದೆ’ ಎಂದು ಟ್ವಿಟರ್ ಗುರುವಾರ ಸ್ಪಷ್ಟನೆ ನೀಡಿದೆ.

ಕಳೆದ ವಾರ ದೆಹಲಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಕುಟುಂಬಸ್ಥರ ಜೊತೆಗಿನ ಫೋಟೊವನ್ನು ರಾಹುಲ್ ಗಾಂಧಿ ಸೇರಿ ಹಲವು ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟರ್ ಖಾತೆಯನ್ನು ಕೂಡ ಲಾಕ್ ಮಾಡಲಾಗಿದೆ.

ಇದನ್ನೂ ಓದಿ: ರಾಹುಲ್ ಚಿತ್ರ, ಅವರದೇ ಹೆಸರು; ಟ್ವಿಟರ್ನಲ್ಲಿ ಕಾಂಗ್ರೆಸ್ ಭಿನ್ನ ಪ್ರತಿಭಟನೆ

‘ಸಂಸ್ಥೆಯ ನಿಯಮಗಳನ್ನು ಕಾನೂನಿಗೆ ಅನುಸಾರವಾಗಿ ಜಾರಿಗೆ ತರಲಾಗಿದೆ. ಇದು ಸೇವೆಯನ್ನು ಬಳಸುವ ಎಲ್ಲರಿಗೂ ಸಮಾನವಾಗಿ ಅನ್ವಯವಾಗುತ್ತದೆ. ಈ ಹಿಂದೆಯೂ ನಮ್ಮ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸುವ ಫೋಟೋಗಳನ್ನು ಹಂಚಿಕೊಂಡ ನೂರಾರು ಟ್ವೀಟ್‌ಗಳ ವಿರುದ್ಧ ಕ್ರಮಕೈಗೊಂಡಿದ್ದೆವು. ಮುಂದೆಯೂ ಇದನ್ನು ಅನುಸರಿಸುತ್ತೇವೆ. ಕೆಲವೊಂದು ಖಾಸಗಿ ಮಾಹಿತಿಗಳ ಬಹಿರಂಗದಿಂದ ಹೆಚ್ಚಿನ ಅಪಾಯ ಎದುರಾಗಬಹುದು. ಹಾಗಾಗಿ ವ್ಯಕ್ತಿಗತ ಗೌಪ್ಯತೆಯನ್ನು ಕಾಪಾಡುವುದು ನಮ್ಮ ಗುರಿಯಾಗಿದೆ’ ಎಂದು ಟ್ವಿಟರ್ ವಕ್ತಾರು ತಿಳಿಸಿದರು.

‘ಟ್ವಿಟರ್ ನಿಯಮಗಳನ್ನು ಎಲ್ಲರೂ ಅರಿತುಕೊಳ್ಳಬೇಕು. ಒಂದು ವೇಳೆ ಎಲ್ಲಾದರೂ ಅದನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ ತಕ್ಷಣವೇ ಅದನ್ನು ವರದಿ ಮಾಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.