ನವದೆಹಲಿ: ಇಸ್ರೇಲ್ ರಾಯಭಾರ ಕಚೇರಿ ಸಮೀಪ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಕ್ಯಾಬ್ನಿಂದ ಇಳಿದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಆ ವ್ಯಕ್ತಿಗಳಿಗೆ ಸ್ಫೋಟದ ಜತೆ ನಂಟಿದೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ.

ದೆಹಲಿ ಪೊಲೀಸ್ ವಿಶೇಷ ದಳವು ಕ್ಯಾಬ್ ಚಾಲಕನನ್ನು ಸಂಪರ್ಕಿಸಿ ಆ ಇಬ್ಬರು ವ್ಯಕ್ತಿಗಳ ಬಗ್ಗೆ ವಿಚಾರಿಸಿದೆ. ಕ್ಯಾಬ್ ಚಾಲಕ ನೀಡಿದ ಮಾಹಿತಿ ಆಧಾರದಲ್ಲಿ ಶಂಕಿತರ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಹೇಳಿರುವುದಾಗಿ ‘ಎಎನ್ಐ’ ವರದಿ ಮಾಡಿದೆ.

ಓದಿ:ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಸಮೀಪ ಐಇಡಿ ಸ್ಫೋಟ; ಹೈ ಅಲರ್ಟ್

ಸ್ಫೋಟದ ಬಳಿಕ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ಸ್ಫೋಟವು ಯಾವುದೋ ದೊಡ್ಡ ಸಂಚಿನ ಭಾಗವಾಗಿರುವ ಸಾಧ್ಯತೆಯೂ ಇದೆ ಎಂದು ಮೂಲಗಳು ಅಭಿಪ್ರಾಯಪಟ್ಟಿವೆ.

‘ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಿರುವ ಬಗ್ಗೆ ವಿಧಿವಿಜ್ಞಾನ ತಜ್ಞರ ತಂಡಕ್ಕೆ ಪುರಾವೆ ದೊರೆತಿದೆ. ಒಂದು ವೇಳೆ ಸಂಚುಕೋರರು ಆರ್ಡಿಎಕ್ಸ್ ಬಳಸಿದ್ದಲ್ಲಿ ಪರಿಣಾಮ ಇನ್ನೂ ತೀವ್ರವಾಗಿರುತ್ತಿತ್ತು’ ಎಂದು ಮೂಲಗಳು ಹೇಳಿವೆ.

ಸ್ಫೋಟ ಸಂಭವಿಸಿದ ಪ್ರದೇಶದ ಸಮೀಪದ ಮರವೊಂದರ ಹಿಂದೆ ಕ್ಯಾಮರಾ ಒಂದನ್ನು ಅಡಗಿಸಿಟ್ಟಿರುವುದೂ ಪೊಲೀಸರ ಗಮನಕ್ಕೆ ಬಂದಿದೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಅರ್ಧ ಸುಟ್ಟ ಗುಲಾಬಿ ಬಣ್ಣದ ಸ್ಕಾರ್ಫ್ ಮತ್ತು ಇಸ್ರೇಲ್ ರಾಯಭಾರಿಗೆ ಸಂಬಂಧಿಸಿದ ಕವರ್ ಬಿದ್ದಿರುವ ಸಿಸಿಟಿವಿ ದೃಶ್ಯಾವಳಿಯೂ ಪೊಲೀಸರಿಗೆ ದೊರೆತಿದೆ. ಈ ವಿಚಾರವಾಗಿ ತನಿಖೆ ಪ್ರಗತಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.