ಪ್ರಧಾನಿ ಶ್ರೀ @narendramodi ಜೀ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬೆಟ್ಟ ಕುರುಬ ಜನಾಂಗ ಸೇರಿದಂತೆ ಒಟ್ಟು 12 ಜಾತಿಗಳನ್ನು ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರ್ಪಡೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. #CabinetDecisionspic.twitter.com/GWnvZw7E8l
ಕರ್ನಾಟಕದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳ ಅಂಚಿನಲ್ಲಿ ಬೆಟ್ಟ ಕುರುಬ ಜನಾಂಗ ನೆಲೆಸಿತ್ತು. ಕಾರಣಾಂತರಗಳಿಂದ ಈ ಜನಾಂಗದವರನ್ನು ಒಕ್ಕಲೆಬ್ಬಿಸಲಾಗಿತ್ತು. ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸುವಂತೆ ಈ ಜನಾಂಗದವರು ಕಳೆದ 30 ವರ್ಷಗಳಿಂದ ಹೋರಾಡುತ್ತಿದ್ದರು.