ಲಖನೌ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆಗೆ ಬಿಜೆಪಿ ಮೈತ್ರಿಕೂಟ 271ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಸಮಾಜವಾದಿ ಪಕ್ಷ ಮೈತ್ರಿಕೂಟ 121ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ ಹಾಗೂ ಬಿಎಸ್ಪಿ 4 ಕ್ಷೇತ್ರಗಳಲ್ಲಿ, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇದರೊಂದಿಗೆ, ಬಿಜೆಪಿ ಮರಳಿ ಅಧಿಕಾರಕ್ಕೇರುವುದು ಬಹುತೇಕ ಖಚಿತಗೊಂಡಿದೆ.

Assembly Poll Results Live | ಪಂಚರಾಜ್ಯ ಚುನಾವಣೆ ಫಲಿತಾಂಶ: ಗೋವಾದಲ್ಲಿ ಸರ್ಕಾರ ರಚನೆ ಕಸರತ್ತು; ರಾಜ್ಯಪಾಲರ ಭೇಟಿಯಾಗಲಿರುವ ಬಿಜೆಪಿ ನಾಯಕರು Live

ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಗಳಿಸಿದರೆ, 1985ರ ಬಳಿಕ ಇದೇ ಮೊದಲ ಬಾರಿಗೆ ಆಡಳಿತ ಪಕ್ಷವೇ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಿದಂತಾಗಲಿದೆ ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.

ಯೋಗಿ ಆದಿತ್ಯನಾಥ್ ಅವರೇ ಇನ್ನೊಂದು ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದರೆ ಅದೂ ಸಹ ದಾಖಲೆಯಾಗಲಿದೆ. 1955ರ ಬಳಿಕ ಇದೇ ಮೊದಲ ಬಾರಿಗೆ, ಐದು ವರ್ಷಗಳ ಪೂರ್ಣಾವಧಿ ಆಡಳಿತ ನಡೆಸಿದ ಬಳಿಕ ಮತ್ತೆ ಅಧಿಕಾರ ಉಳಿಸಿಕೊಂಡ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಗುರುತಿಸಿಕೊಳ್ಳಲಿದ್ದಾರೆ. 1950ರಿಂದ 54ರ ವರೆಗೆ ಗೋವಿಂದ ವಲ್ಲಭ ಪಂತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 1955ರಿಂದ 61 ರವರೆಗೆ ಅವರೇ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದರು.

Assembly Poll Results: ಪಂಚರಾಜ್ಯ ಚುನಾವಣೆ ಫಲಿತಾಂಶ, ಇಲ್ಲಿವೆ ಮುಖ್ಯಾಂಶಗಳು

2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಎಸ್ಪಿ– 47, ಬಿಎಸ್ಪಿ– 19 ಹಾಗೂ ಕಾಂಗ್ರೆಸ್– 07ರಲ್ಲಿ ಗೆಲುವು ಸಾಧಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.