ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಮತದಾನವು ಗುರುವಾರ ಆರಂಭವಾಗಿದೆ. ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಎಲ್ಲರೂ ಉತ್ಸಾಹದಲ್ಲಿ ಭಾಗವಹಿಸಿ, ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ ಒಟ್ಟು 58 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಇದನ್ನೂ ಓದಿ:ಉತ್ತರಪ್ರದೇಶ: ಇಂದು ಮೊದಲ ಹಂತದ ಮತದಾನ: ಬಿಜೆಪಿ ಸಚಿವರ ಭವಿಷ್ಯ ನಿರ್ಧಾರ

'ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದೆ. ಎಲ್ಲ ಮತದಾರರು ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಉತ್ಸಾಹದಿಂದ ಭಾಗವಹಿಸಬೇಕೆಂದು ನಾನು ವಿನಂತಿಸುತ್ತೇನೆ. ನೆನಪಿಡಿ - ಮೊದಲು ಮತದಾನ ಬಳಿಕ ಉಪಹಾರ!' ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.

ಮತದಾನವು ಬೆಳಿಗ್ಗೆ 7ಗಂಟೆಗೆ ಆರಂಭವಾಗಿದ್ದು, ಸಂಜೆ 6ರವರೆಗೆ ಮುಂದುವರಿಯಲಿದೆ. ಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಬಿಗಿಭದ್ರತೆ ಏರ್ಪಡಿಸಲಾಗಿದ್ದು, ಕೋವಿಡ್ ನಿಮಯಗಳನ್ನು ಪಾಲಿಸಲಾಗುತ್ತಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ, ಆರ್ಎಲ್ಡಿ–ಎಸ್ಪಿ, ಕಾಂಗ್ರೆಸ್ ಮತ್ತು ಬಿಎಸ್ಪಿ ಪಕ್ಷಗಳ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳೂ ಸೇರಿ ಒಟ್ಟು 623 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಕ್ಷೇತ್ರಗಳಲ್ಲಿ 2.27 ಕೋಟಿ ಮತದಾರರು ಇದ್ದಾರೆ.

403 ಸದಸ್ಯ ಬಲದ ಉತ್ತರ ಪ್ರದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ (ಫೆಬ್ರುವರಿ 10, 14, 20, 23, 27, ಮಾರ್ಚ್ 3 ಮತ್ತು 7) ಮತದಾನ ನಡೆಯುತ್ತಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರಬೀಳಲಿದೆ.

2017ರಲ್ಲಿ ಈ 58 ಕ್ಷೇತ್ರಗಳಲ್ಲಿ, 53 ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿತ್ತು. ಈ ಬಾರಿ ಬಿಜೆಪಿ ಮತ್ತು ಆರ್ಎಲ್ಡಿ–ಎಸ್ಪಿ ಮೈತ್ರಿಕೂಟದ ಅಭ್ಯರ್ಥಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.