ಭದೋಹಿ(ಉತ್ತರಪ್ರದೇಶ): ಸಾಮೂಹಿಕ ಅತ್ಯಾಚಾರ ಮತ್ತು ವಂಚನೆ ಆರೋಪ ಸಂಬಂಧ ಉತ್ತರ ಪ್ರದೇಶದ ಮಾಜಿ ಶಾಸಕ ವಿಜಯ್ ಮಿಶ್ರಾ ಪುತ್ರ ವಿಷ್ಣು ಮಿಶ್ರಾ ಅವರನ್ನು ಉತ್ತರಪ್ರದೇಶ ವಿಶೇಷ ಕಾರ್ಯಪಡೆ ಪುಣೆಯಲ್ಲಿ ಬಂಧಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ವಿಷ್ಣು 2020 ಆಗಸ್ಟ್‌ನಿಂದ ತಲೆಮರೆಸಿಕೊಂಡಿದ್ದು, ಭಾನುವಾರ ಬಂಧಿಸಲಾಗಿದೆ. ಇವರ ಸುಳಿವು ನೀಡಿದವರಿಗೆ ಮೊದಲು 25,000 ನಂತರ, ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು ಎಂದು ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ.

ವಂಚನೆ ಮತ್ತು ಕೊಲೆ ಬೆದರಿಕೆ ಆರೋಪದಲ್ಲಿ 2020ರಲ್ಲಿ ಶಾಸಕ ವಿಜಯ್ ಮಿಶ್ರಾ ಅವರನ್ನು ಬಂಧಿಸಲಾಗಿದ್ದು, ಸದ್ಯ ಆಗ್ರಾ ಕಾರಾಗೃಹದಲ್ಲಿದ್ದಾರೆ. ಪತ್ನಿ ರಾಮ್ ಲಲ್ಲಿ ಮಿಶ್ರಾ ಅವರು ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ. ವಿಷ್ಣು 2020ರಿಂದ ತಲೆಮರೆಸಿಕೊಂಡಿದ್ದು, ಇವರ ವಿರುದ್ಧ ಅದೇ ವರ್ಷ ಸೆಪ್ಟೆಂಬರ್‌ನಲ್ಲಿ ಲುಕ್‌ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.