ಗೋರಖ್ಪುರ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ(ಪಿಎಫ್ಐ) ‘ತರಬೇತಿ ಕಮಾಂಡರ್' ಎಂದು ಆರೋಪಿಸಿ, ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

‘ಮೊಹಮ್ಮದ್ ರಶೀದ್ ಎಂಬಾತನನ್ನು ಬಸ್ತಿ ರೈಲು ನಿಲ್ದಾಣದ ಬಳಿಯಿಂದ ಶನಿವಾರ ರಾತ್ರಿ ಬಂಧಿಸಲಾಗಿದೆ. ಪಿಎಫ್ಐನ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಂಬೈಗೆ ತೆರಳುವ ಸಲುವಾಗಿ ಈತ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದ’ ಎಂದು ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ(ಎಸ್ಟಿಎಫ್) ಅಧಿಕಾರಿಗಳು ತಿಳಿಸಿದ್ದಾರೆ.

‘ರಶೀದ್ ಬಳಿಯಿಂದ ದೇಶ ವಿರೋಧಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವ ಬರಹಗಳು, ಸಿ.ಡಿ, ನಕಲಿ ಆಧಾರ್ ಕಾರ್ಡ್ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.