ಲಖನೌ: ಮುಂಬರುವ 2022ರ ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಈಗಾಗಲೇ ಆರೋಪ, ಪ್ರತ್ಯಾರೋಪ, ಸವಾಲು, ಪ್ರತಿಸವಾಲುಗಳು ಸದ್ದು ಮಾಡುತ್ತಿವೆ.

ಇತ್ತೀಚೆಗೆ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಲು ಬಿಡುವುದಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಯೋಗಿ, 300ಕ್ಕಿಂತ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ತಿರುಗೇಟು ನೀಡಿದ್ದಾರೆ.

'ಒವೈಸಿ ಅವರು ದೊಡ್ಡ ರಾಷ್ಟ್ರೀಯ ನಾಯಕರು. ರಾಷ್ಟ್ರದ ವಿವಿಧೆಡೆಗೆ ಪ್ರಚಾರ ಮಾಡಲು ಹೋಗುತ್ತಾರೆ. ಓವೈಸಿ ಅವರು ಜನರ ಮಧ್ಯೆ ಅವರದ್ದೇ ಆದ ವಿಶ್ವಾಸಾರ್ಹತೆ ಹೊಂದಿದ್ದಾರೆ. ಅವರು ಬಿಜೆಪಿಗೆ ಸವಾಲು ಹಾಕಿದ್ದರೆ ಅದನ್ನು ಬಿಜೆಪಿ ಕಾರ್ಯಕರ್ತ ಸ್ವೀಕರಿಸುತ್ತಾನೆ' ಎಂದು ಆದಿತ್ಯನಾಥ್ ಹೇಳಿದ್ದಾರೆ.

ಸಿಎಂ ಮಮತಾರನ್ನು ಕೆಳಗಿಳಿಸಲು ರಾವತ್ ರಾಜೀನಾಮೆಯೆಂಬ ಬಿಜೆಪಿಯ ನೈತಿಕ ದಾಳ?

'ಬಿಜೆಪಿ ಸರ್ಕಾರ ರಚಿಸಲಿದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಕೇಂದ್ರದ ನಾಯಕರು ರಾಜ್ಯಕ್ಕೆ 300ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ನೀಡಿದ್ದಾರೆ' ಎಂದು ಯೋಗಿ ಆದಿತ್ಯನಾಥ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳ ಪೈಕಿ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಂಐಎಂ ಯೋಜನೆ ರೂಪಿಸಿದೆ. ಓಂ ಪ್ರಕಾಶ್ ರಾಜ್ಭರ್ ನೇತೃತ್ವದ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷ(ಎಸ್ಬಿಎಸ್ಪಿ) ಜೊತೆ ಒವೈಸಿ ಮೈತ್ರಿ ಮಾಡಿಕೊಂಡಿದ್ದಾರೆ. ಎಸ್ಬಿಎಸ್ಪಿ ಪಕ್ಷವು ಇತರ 9 ಸ್ಥಳೀಯ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡಿದ್ದು, ಸಂಘಟನೆಗೆ 'ಭಾಗಿದಾರಿ ಸಂಕಲ್ಪ ಮೋರ್ಚಾ' ಎಂದು ಹೆಸರಿಡಲಾಗಿ. ಮೈತ್ರಿ ಪಕ್ಷಗಳು ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ ಎಂದು 'ಎನ್ಡಿಟಿವಿ' ವರದಿ ಮಾಡಿದೆ.

Explainer: ಐಎಂಡಿಬಿ ಟಾಪ್ 250ರ ಪಟ್ಟಿಯಲ್ಲಿ ಇರೋದೇ ಕನ್ನಡದ ಎರಡು ಚಿತ್ರಗಳು!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.