ಕೋಲ್ಕತ್ತ: ಮುಂಬರುವ ಉತ್ತರ ಪ್ರದೇಶದ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರು ಗೆಲ್ಲುವ ಅವಕಾಶವಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಈ ವಿಚಾರವಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ಜತೆ ಮಾತನಾಡಿರುವ ಅವರು, ‘ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಗೆಲ್ಲಬೇಕೆಂದು ನಾನು ಬಯಸುತ್ತೇನೆ’ ಎಂದು ಹೇಳಿದ್ದಾರೆ.

‘ಜನರು ಬೆಂಬಲಿಸಿದರೆ, ಈ ಚುನಾವಣೆಯಲ್ಲಿ ಅಖಿಲೇಶ್ ಅವರು ಗೆಲ್ಲುವ ಅವಕಾಶವಿದೆ’ ಎಂದೂ ಮಮತಾ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಪರವಾಗಿ ಮಮತಾ ಅವರು ಯುಪಿಯಲ್ಲಿ ಪ್ರಚಾರ ಮಾಡಲಿದ್ದಾರೆ ಎಂಬ ಮಾತುಗಳೂ ಕೇಳಿಬಂದಿದೆ.

ಫೆ.10 ರಿಂದ ಆರಂಭವಾಗಲಿರುವ ಯುಪಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ–ಪ್ರಧಾನಿ ರ್ಯಾಲಿ ರದ್ದು: ಬಿಜೆಪಿಗೆ ಮಾತ್ರ ಹವಾಮಾನ ಕೆಟ್ಟಿದೆ ಎಂದ ಚೌಧರಿ

ಕಳೆದ ವರ್ಷ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿಯು ಅಭೂತಪೂರ್ವ ಗೆಲವು ಸಾಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.