ಲಖನೌ: ಮತದಾರರು ತಪ್ಪು ಮಾಡಿದರೆ, ಉತ್ತರ ಪ್ರದೇಶವು ಮತ್ತೊಂದು ಕಾಶ್ಮೀರ, ಕೇರಳ ಅಥವಾ ಪಶ್ಚಿಮ ಬಂಗಾಳವಾಗಿ ಬದಲಾಗುತ್ತದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.

403 ಸದಸ್ಯ ಬಲದ ಉತ್ತರ ಪ್ರದೇಶ ಚುನಾವಣೆಗೆ ಇಂದು (ಫೆ.10) ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡಿರುವವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಯೋಗಿ, 'ಎಚ್ಚರ, ನೀವು ಮೈಮರೆತರೆ, ಈ ಐದು ವರ್ಷಗಳ ದುಡಿಮೆಯು ವ್ಯರ್ಥವಾಗುತ್ತದೆ. ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಬಂಗಾಳವಾಗಿ ಬದಲಾಗಲು ಹೆಚ್ಚು ಸಮಯ ಬೇಕಾಗುವುದಿಲ್ಲ' ಎಂದು ಎಚ್ಚರಿಕೆ ನೀಡಿದ್ದಾರೆ.

ಮುಂದುವರಿದು,ಬಿಜೆಪಿ ಅಧಿಕಾರಕ್ಕೆ ಬಂದರೆ 'ಭಯ ಮುಕ್ತ ಜೀವನ' ಖಾತ್ರಿಯಾಗಲಿದೆ ಎಂದು ಭರವಸೆ ನೀಡಿರುವ ಅವರು, 'ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ.ಬಿಜೆಪಿಯ ಡಬಲ್ ಎಂಜಿನ್ (ಕೇಂದ್ರ ಮತ್ತು ರಾಜ್ಯದಲ್ಲಿ) ಸರ್ಕಾರವುಕಳೆದ ಐದು ವರ್ಷಗಳಲ್ಲಿ ಸಮರ್ಪಣಾಭಾವ ಮತ್ತು ಬದ್ಧತೆಯಿಂದ ಎಲ್ಲ ಕಾರ್ಯಗಳನ್ನೂ ಮಾಡಿದೆ. ಅವೆಲ್ಲವನ್ನೂ ನೀವುನೋಡಿದ್ದೀರಿ ಮತ್ತು ವಿವರವಾಗಿ ಕೇಳಿದ್ದೀರಿ' ಎಂದಿದ್ದಾರೆ.

ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳು ಮತ್ತು ಯೋಜನೆಗಳ ಕುರಿತಾಗಿಯೂ ಸರಣಿ ಟ್ವೀಟ್‌ಗಳನ್ನು ಮಾಡಿರುವ ಯೋಗಿ, ಮತ್ತೊಮ್ಮೆ ಬಿಜೆಪಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ.

ಉತ್ತರ ಪ್ರದೇಶದ ಪಶ್ಚಿಮ ಭಾಗದ 11 ಜಿಲ್ಲೆಗಳ ಒಟ್ಟು 58 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.