ಪಿಥೋರಗಢ: ಉತ್ತರಾಖಂಡದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮತಪತ್ರಗಳನ್ನು ತಿದ್ದುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬೆನ್ನಲ್ಲೇ, ಎಚ್ಚೆತ್ತುಕೊಂಡಿರುವ ಕೇಂದ್ರ ಚುನಾವಣಾ ಆಯೋಗವು ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಿಎಂ ಹರೀಶ್ ರಾವತ್ ಅವರು ಇತ್ತೀಚೆಗೆ ಮತಪತ್ರಗಳನ್ನು ತಿದ್ದುತ್ತಿರುವ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಕ್ರಮ ಜರುಗಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು.

ಪ್ರಕರಣ ಸಂಬಂಧ ಚುನಾವಣಾ ಆಯೋಗದ ಸೂಚನೆ ಮೇರೆಗೆ ದಿದಿಹತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಓದಿ...ಯುದ್ಧ ಭೀತಿ: ಶಾಂತಿ ಕಾಪಾಡಲು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮನವಿ

ಒಬ್ಬ ವ್ಯಕ್ತಿ ಹಲವಾರು ಅಂಚೆ ಮತಪತ್ರಗಳಿಗೆ ಟಿಕ್ ಮತ್ತು ಸಹಿ ಮಾಡುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿತ್ತು. ಈ ವಿಡಿಯೊವನ್ನು ಉಲ್ಲೇಖಿಸಿ, ಉತ್ತರಾಖಂಡದಲ್ಲಿ ಮತಪತ್ರಗಳನ್ನು ತಿದ್ದಲಾಗುತ್ತಿದೆ ಎಂದು ರಾವತ್ ಆರೋಪಿಸಿದ್ದರು.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಗಣೇಶ್ ಗೋಡಿಯಾಲ್, ‘ಉತ್ತರಾಖಂಡ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ಆಕ್ರಮಗಳ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ’ ಎಂದು ತಿಳಿಸಿದ್ದಾರೆ.

ಉತ್ತರಾಖಂಡ ವಿಧಾನಸಭೆಯ 70 ಕ್ಷೇತ್ರಗಳಿಗೆ ಫೆಬ್ರುವರಿ 14ರಂದು ಮತದಾನ ನಡೆದಿತ್ತು. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ಓದಿ...ಉತ್ತರಾ ಖಂಡದಲ್ಲಿ ಅಂಚೆ ಮತಪತ್ರ ತಿದ್ದುತ್ತಿರುವ ವಿಡಿಯೊ ಹಂಚಿಕೊಂಡ ಹರೀಶ್ ರಾವತ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.