ನವದೆಹಲಿ:ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಮಹತ್ವದ ಸಭೆಗೂ ಮುನ್ನ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಅವರು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಇದರಿಂದಾಗಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರೇ,ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಯ ಮೈತ್ರಿಕೂಟದ ಅಭ್ಯರ್ಥಿಯಾಗಲಿದ್ದಾರೆಯೇ ಎನ್ನಲಾಗುತ್ತಿದೆ.

ರಾಷ್ಟ್ರಪತಿ ಚುನಾವಣೆಯು ಜುಲೈ 18ರಂದು ನಡೆಯಲಿದೆ. ಚುನಾವಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆಇದೇ ದಿನ (ಮಂಗಳವಾರ) ಸಂಸದೀಯ ಪಕ್ಷದ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೂ ವರ್ಚುವಲ್ ಆಗಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಎಂಸಿ ತೊರೆದ ಯಶವಂತ ಸಿನ್ಹಾ

ಅದಕ್ಕೂ ಮುನ್ನ ಬಿಜೆಪಿ ನಾಯಕರು ನಾಯ್ಡು ಜೊತೆ ನಡೆಸಿರುವ ಮಾತುಕತೆ ಮಹತ್ವ ಪಡೆದುಕೊಂಡಿದೆ.

ಚುನಾವಣೆ ಸಂಬಂಧ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ನಡ್ಡಾ ಅವರು ಪಕ್ಷದ 14 ಸದಸ್ಯರನ್ನೊಳಗೊಂಡ ಉಸ್ತುವಾರಿ ಸಮಿತಿಯೊಂದಿಗೆ ಸೋಮವಾರ ಸಭೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.