ನವದೆಹಲಿ: ಭಾರತದ ನೂತನ ರಾಷ್ಟ್ರಪತಿ ಆಯ್ಕೆಗಾಗಿ ಸಂಸತ್ತು ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಇರಿಸಲಾಗಿರುವ ಮತಗಟ್ಟೆಗಳಲ್ಲಿ ಸೋಮವಾರ ಬೆಳಗ್ಗೆ 10 ರಿಂದ ಮತದಾನ ಆರಂಭವಾಗಿದೆ.

ಸಂಸತ್ತಿನ ಆವರಣದಲ್ಲಿರುವ ಮತಗಟ್ಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.

ಮತದಾನದ ನಂತರ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ‘ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಈ ಚುನಾವಣೆಯಲ್ಲಿ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ’ ಎಂದು ಹೇಳಿದರು.

ರಾಷ್ಟ್ರಪತಿ ಚುನಾವಣೆಗೆ ದ್ರೌಪದಿ ಮುರ್ಮುಅವರು ಎನ್‌ಡಿಎಯ ಅಭ್ಯರ್ಥಿಯಾಗಿದ್ದಾರೆ. ವಿರೋಧ ಪಕ್ಷಗಳ ಬೆಂಬಲದೊಂದಿಗೆ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದಾರೆ.

ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಈ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದಾರೆ.

ಸಂಸತ್ತಿನ ಚುನಾಯಿತ ಸದಸ್ಯರು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಎಲ್ಲಾ ರಾಜ್ಯ ವಿಧಾನಸಭೆ ಸದಸ್ಯರು ರಾಷ್ಟ್ರಪತಿ ಆಯ್ಕೆಗೆ ಮತ ಚಲಾಯಿಸುತ್ತಿದ್ದಾರೆ. ನಾಮನಿರ್ದೇಶಿತ ಸಂಸದರು ಮತ್ತು ವಿಧಾನ ಪರಿಷತ್ತಿನ ಸದಸ್ಯರು ಮತ ಚಲಾಯಿಸಲು ಅರ್ಹರಲ್ಲ.

ಸಂಸತ್‌ನ 776 ಸದಸ್ಯರು ಮತ್ತು 4,033 ಶಾಸಕರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.

ಮತಗಳ ಒಟ್ಟು ಮೌಲ್ಯ 10,86,431 ಆಗಿದ್ದು, ಇದರಲ್ಲಿ ಶಾಸಕರ ಮತಗಳು 5,43,231 ಮತ್ತು ಸಂಸದರ ಮತಗಳು 5,43,200 ಆಗಿದೆ.

ಜುಲೈ 21ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.