ಜೈಪುರ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ನಿರ್ಧರಿಸಿದರೆ ಶಾಸಕರನ್ನು ದೆಹಲಿಗೆ ಬರಮಾಡಿಕೊಳ್ಳುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರು ಹೇಳಿದ್ದಾರೆ.

ಆದರೆ ಅದಕ್ಕೂ ಮೊದಲು 'ಭಾರತ್ ಜೋಡೋ ಯಾತ್ರೆ' ಸಾಗುತ್ತಿರುವ ಕೊಚ್ಚಿಗೆ ಭೇಟಿ ನೀಡುವುದಾಗಿ, ಅಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಒಪ್ಪಿಗೆ ಪಡೆಯುವುದಾಗಿ ಹೇಳಿದ್ದಾರೆ. ಇದನ್ನು ಗೆಹಲೋತ್ ಅವರ ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ತಿಳಿಸಿದ್ದಾಗಿ ಸಂಪುಟ ಸಚಿವರು ತಿಳಿಸಿದ್ದಾರೆ.

ನೂತನ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಗೆಹಲೋತ್ ಅವರು ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದ್ದರು. ನಂತರ ಶಾಸಕಾಂಗ ಸಭೆ ನಡೆಸಿದರು.

ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಪ್ರತಾಪ್ ಸಿಂಗ್ ಅವರು, 'ಸಿಎಂ ಅಶೋಕ್ ಗೆಹಲೋತ್ ಅವರು ಪಕ್ಷದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದರೆ ಶಾಸಕರಿಗೆ ದೆಹಲಿಗೆ ಬರುವಂತೆ ಸಂದೇಶ ಸಿಗಲಿದೆ' ಎಂದಿದ್ದಾರೆ.

ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಸೆಪ್ಟೆಂಬರ್ 24ರಿಂದ 30ರ ವರೆಗೆ ಸಮಯ ನಿಗದಿ ಮಾಡಲಾಗಿದೆ. ನಾಮ ನಿರ್ದೇಶನ ವಾಪಸ್ ಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ. 19ಕ್ಕೆ ಫಲಿತಾಂಶ ಹೊರಬೀಳಲಿದೆ.

ದ್ವೇಷ ಭಾಷಣ: 34 ಪ್ರಕರಣ ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.