ಲಖನೌ: ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಹಾಗೂ ಮಗಳಿಗೆ ಕೋವಿಡ್ ದೃಢಪಟ್ಟಿದೆ.ಆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಖಿಲೇಶ್ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿಯು, ‘ಅಖಿಲೇಶ್ ಯಾದವ್ ಅವರ ಕುಟುಂಬ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾರೈಸಿದ್ದಾರೆ‘ ಎಂದು ತಿಳಿಸಿದೆ.

ಸೋಂಕು ಪತ್ತೆಯಾಗಿರುವುದರ ಬಗ್ಗೆ ಬುಧವಾರ ಟ್ವೀಟ್ ಮಾಡಿದ್ದ ಡಿಂಪಲ್ ಯಾದವ್, ‘ನನಗೆ ಕೋವಿಡ್ದೃಢಪಟ್ಟಿದೆ. ನನ್ನಲ್ಲಿ ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ನನ್ನ ಹಾಗೂ ಇತರರ ಸುರಕ್ಷತೆಗಾಗಿ ನಾನು ಪ್ರತ್ಯೇಕವಾಸದ ಮೊರೆ ಹೋಗಿದ್ದೇನೆ‘ ಎಂದು ತಿಳಿಸಿದ್ದರು.

ಅಖಿಲೇಶ್ ಯಾದವ್ ಅವರು ಸೋಂಕು ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ದೃಢಪಟ್ಟಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.