ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಒಂಬತ್ತು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದು, ರಾಜ್ಯದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

ಒಂಬತ್ತು ಅಧಿಕಾರಿಗಳ ವಿವರ:

ಆರ್.ಪಿ. ಕುಲಕರ್ಣಿ,ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಮುಖ್ಯ ಯೋಜನಾಧಿಕಾರಿ

ವೆಂಕಟೇಶ್,ಮಂಡ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ

ಜಿ. ಶ್ರೀಧರ್,ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್

ಕೃಷ್ಣ ಎಸ್.ಹೆಬ್ಸೂರು,ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಉಡುಪಿ ವಿಭಾಗದ ಕಾರ್ಯನಿರ್ವಾಹಕ ಎಂಜಿಜಿಯರ್

ಎಚ್.ಆರ್. ಕೃಷ್ಣಪ್ಪ,ಕೋಲಾರದ ನಗರಾಭಿವೃದ್ಧಿ ಯೋಜನಾ ಸಹಾಯಕ ನಿರ್ದೇಶಕ

ಸುರೇಶ್ ಮೊಹ್ರೆ,ಬೀದರ್ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಿರಿಯ ಎಂಜಿನಿಯರ್

ಸಿದ್ದರಾಮ ಮಲ್ಲಿಕಾರ್ಜುನ್,ಹೆಸ್ಕಾಂನ ವಿಜಯಪುರ ನಗರ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್

ಎ. ಕೃಷ್ಣಮೂರ್ತಿ,ಬೆಂಗಳೂರಿನ ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ

ಎ.ಎನ್. ವಿಜಯಕುಮಾರ್,ಬಳ್ಳಾರಿಯ ವಿದ್ಯುತ್ ಇನ್ಸ್‌ಪೆಕ್ಟರ್

ಈ ಎಲ್ಲ ಅಧಿಕಾರಿಗಳಮನೆಗಳು, ಕಚೇರಿಗಳು, ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಗುರುವಾರ ನಸುಕಿನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೋಧ ನಡೆಯುತ್ತಿದೆ.

ಎಸಿಬಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. 40ಕ್ಕೂ ಹೆಚ್ಚು ತಂಡಗಳಲ್ಲಿ ನೂರಾರು ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಮುಂಬೈ: ಗರ್ಭಿಣಿಯರಿಗೆ ವಿಶೇಷ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ

ರಾಜ್ಯದ ವಿವಿಧೆಡೆ ನಡೆದ ಎಸಿಬಿ ದಾಳಿಗಳ ವಿವರ

ವಿಜಯಪುರ: ಕೆಪಿಟಿಸಿಎಲ್ ಎಇಇ ಸಿದ್ಧರಾಮ ಬಿರಾದಾರ ಮನೆ ಮೇಲೆ ಎಸಿಬಿ ದಾಳಿ

ಕಾರ್ಯ ನಿರ್ವಾಹಕ ಎಂಜಿನಿಯರ್ ಕೃಷ್ಣ ಎಸ್.ಹೆಬ್ಸೂರು ಮನೆ ಮೇಲೆ ಎಸಿಬಿ ದಾಳಿ

ನಗರ ಯೋಜನೆ ಸಹಾಯಕ ನಿರ್ದೇಶಕ ಎಚ್.ಆರ್. ಕೃಷ್ಣಪ್ಪ ಮನೆ ಮೇಲೆ ಎಸಿಬಿ ದಾಳಿ

ಕಿರಿಯ ಇಂಜಿನಿಯರ್ ಸುರೇಶ್ ಮೋರೆಯ ಮನೆ ಮೇಲೆ ಎಸಿಬಿ ದಾಳಿ

ಜೆಸ್ಕಾಂ ಇನ್ಸ್‌ಪೆಕ್ಟರ್ ವಿಜಯಕುಮಾರ್ ಮನೆ, ಕಚೇರಿಗಳ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.