ನಾಗಮಂಗಲ (ಮಂಡ್ಯ ): ತಾಲ್ಲೂಕಿನ ಸೋಮನಹಳ್ಳಿ ದೇವಾಲ ಯದ ಬಳಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ನೆನೆದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕಣ್ಣೀರಿಟ್ಟರು.

ಕೆಲ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮ ಅದಾಗಿತ್ತು. ನೇರ ಪ್ರಸಾರದಲ್ಲಿ ದೇವೇಗೌಡರು ವೀಕ್ಷಿಸುತ್ತಿ ದ್ದರು. ಆ ದೃಶ್ಯವನ್ನು ಪರದೆಯಲ್ಲಿ ತೋರಿಸಲಾಗುತ್ತಿತ್ತು. ‘ಅನಾರೋಗ್ಯದ ಕಾರಣ ದೇವೇಗೌಡರು ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ಯಾರದೋ ಕೆಟ್ಟ ಕಣ್ಣು ಅವರ ಮೇಲೆ ಬಿದ್ದಿದೆ’ ಎಂದು ಕುಮಾರಸ್ವಾಮಿ ಕಣ್ಣೀರಿಟ್ಟರು. ಈ ವೇಳೆ ಎಚ್.ಡಿ.ರೇವಣ್ಣ ಸಹ ಭಾವುಕರಾದರು.

‘ನನ್ನನ್ನು ಸಿ.ಎಂ ಮಾಡಿದ್ದು ನಾನು ಎಂದು ಮಾಜಿ ಮುಖ್ಯಮಂತ್ರಿಯೊಬ್ಬರು ಹೇಳುತ್ತಾರೆ. ಆದರೆ, ತಂದೆ–ತಾಯಿ, ನಿಮ್ಮೆಲ್ಲರ ಆಶೀರ್ವಾದದಿಂದ ಅದು ಸಾಧ್ಯವಾಗಿದೆ’ ಎಂದು ಕಾಂಗ್ರೆಸ್ನ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ‘ಜಿಲ್ಲೆಗೆ ನೀಡಿದ್ದ ಅನುದಾನ ಕಡಿತಗೊಳಿಸಿದ್ದ ಬಿಜೆಪಿ ಸರ್ಕಾರ ಮಂಡ್ಯದಲ್ಲಿ ವಿಜಯ ಪತಾಕೆ ಹಾರಿಸುತ್ತೇವೆ ಎನ್ನುತ್ತಾರೆ. ಆದರೆ, ಯಾವ ರೀತಿ ಪತಾಕೆ ಹಾರಿಸುತ್ತಾರೋ ಗೊತ್ತಿಲ್ಲ’ ಎಂದು ಸಚಿವ ನಾರಾಯಣ ಗೌಡ ವಿರುದ್ಧ ಪರೋಕ್ಷವಾಗಿ
ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.