ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಘೋಷಿಸಿದ ‘ಅಮೃತ ಯೋಜನೆ’ಗಳಿಗೆ ಅನುದಾನ ಒದಗಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.

‘ಅಮೃತ ನಿರ್ಮಲ ನಗರ’ ಯೋಜನೆಯಡಿ 75 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುವುದು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ಸೌಂದರ್ಯ ಕಾಪಾಡಿಕೊಳ್ಳಲು ಪ್ರತಿ ಸ್ಥಳೀಯ ಸಂಸ್ಥೆಗೆ ತಲಾ ₹ 1 ಕೋಟಿಯಂತೆ ₹75 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಯಿತು ಎಂದರು.

50 ಸಾವಿರ ಕೋಟಿ ಖರ್ಚಾದರೂ ಎತ್ತಿನಹೊಳೆಯಿಂದ ನೀರು ತರಲಾಗಲ್ಲ: ಕುಮಾರಸ್ವಾಮಿ

ಅಮೃತ ಆರೋಗ್ಯ ಮೂಲಸೌಕರ್ಯ ಉನ್ನತೀಕರಣ ಯೋಜನೆ ಅಡಿಯಲ್ಲಿ 750 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ₹ 150 ಕೋಟಿ ವೆಚ್ಚ ಮಾಡಲಾಗುವುದು ಎಂದು ಹೇಳಿದರು.

ಅಮೃತ ಅಂಗನವಾಡಿ ಕೇಂದ್ರ ಯೋಜನೆಯಡಿ ಪ್ರತಿ ಅಂಗನವಾಡಿಯನ್ನು ತಲಾ ₹ 1 ಲಕ್ಷ ಅನುದಾನದಲ್ಲಿ ಒಟ್ಟು 750 ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ ₹ 150 ಕೋಟಿ ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ ಎಂದರು.

ಕಿರು ಉದ್ದಿಮೆಗಳ ಆರಂಭ: 7,500 ಸ್ವಸಹಾಯ ಗುಂಪುಗಳನ್ನು ಕಿರು ಉದ್ಯಮ ಸಂಸ್ಥೆಗಳನ್ನಾಗಿ ರೂಪಿಸಲು ‘ಅಮೃತ ಸ್ವಸಹಾಯ ಕಿರು ಉದ್ಯಮ’ ಯೋಜನೆಯಡಿ ತಲಾ ₹ 1 ಲಕ್ಷ ಮೂಲಧನ ನೀಡಲಾಗುವುದು. ಇದಕ್ಕಾಗಿ ₹ 75 ಕೋಟಿ ಅನುದಾನ ಒದಗಿಸಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.

ಪೂಜೆ ಮಾಡುತ್ತಿದ್ದವನ ತಲೆಗೆ ಬಿತ್ತು ಗುಂಡೇಟು! ಭಯಾನಕ ಶೂಟ್ಔಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.