ತುಮಕೂರು: ಮುಖ್ಯಮಂತ್ರಿ ಸ್ಥಾನ ನೀಡಲು ₹2,500 ಕೋಟಿ ಹಣ ಕೇಳಿದ್ದಾಗಿ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ನೋಟಿಸ್ ನೀಡಿ ವಿವರಣೆ ಪಡೆಯಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಯತ್ನಾಳ್ ಹೇಳಿರುವ ಎಲ್ಲಾ ವಿಚಾರಗಳನ್ನು ಪಕ್ಷದ ಕೇಂದ್ರ ಶಿಸ್ತು ಸಮಿತಿಯ ಗಮನಕ್ಕೆ ತರಲಾಗಿದ್ದು, ವರಿಷ್ಠರಿಗೆ ಎಲ್ಲಾ ಮಾಹಿತಿ ನೀಡಲಾಗಿದೆ. ಅವರಿಂದ ಪರಿಪೂರ್ಣ ವಿವರಣೆ ಪಡೆದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಅನಗತ್ಯ ಹೇಳಿಕೆ ನೀಡಿದ ಯತ್ನಾಳ್ ಅವರಿಗೆ ಈವರೆಗೆ ಎರಡು ಬಾರಿ ನೋಟಿಸ್ ಕೊಟ್ಟು, ವಿವರಣೆ ಪಡೆದುಕೊಳ್ಳಲಾಗಿದೆ. ಈ ಬಾರಿಯೂ ಶಿಸ್ತು ಸಮಿತಿ ಮೂಲಕ ನೋಟಿಸ್ ನೀಡಲಾಗುವುದು. ಉತ್ತರ ಬಂದ ನಂತರ ಕ್ರಮ ಜರುಗಿಸಲಾಗುತ್ತದೆ. ಬಿಜೆಪಿಯಲ್ಲಿ ದೊಡ್ಡವರು, ಸಣ್ಣವರು ಎನ್ನುವ ಪ್ರಶ್ನೆ ಇಲ್ಲ. ಎಲ್ಲರೂ ಶಿಸ್ತು ಸಮಿತಿಯ ವ್ಯಾಪ್ತಿಗೆ ಒಳಪಡುತ್ತಾರೆ’ ಎಂದರು.

ವಯಸ್ಸಾದ ಗೋವುಗಳ ಸಮಸ್ಯೆಗೆ ಸರ್ಕಾರ ಪರಿಹಾರ ಹುಡುಕಿದೆ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.