ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ, ರಾಜಕಾರಣಿ ಜಗ್ಗೇಶ್‌ಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ಘೋಷಣೆ ಮಾಡಿದೆ.

ರಾಜ್ಯವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯು ಅಂತಿಮವಾಗಿ ಟಿಕೆಟ್ ಘೋಷಣೆ ಮಾಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಟಿಕೆಟ್ ನೀಡಿರುವ ಆದೇಶ ಹೊರಡಿಸಿದ್ದಾರೆ.

ನಿರ್ಮಲ ಕುಮಾರ್ ಸುರಾನಾ, ಲೆಹರ್ ಸಿಂಗ್, ಕೆ.ಸಿ. ರಾಮಮೂರ್ತಿ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಇವರಿಗೆ ಟಿಕೆಟ್ ನೀಡಿಲ್ಲ.

ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಒಕ್ಕಲಿಗ ಸಮುದಾಯವನ್ನು ಪರಿಗಣಿಸಿ ಜಗ್ಗೇಶ್‌ಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವಿವಿಧ ರಾಜ್ಯಗಳಿಂದ ಖಾಲಿ ಆಗಲಿರುವ ಒಟ್ಟು 16 ಸ್ಥಾನಗಳಿಗೆ ಟಿಕೆಟ್ ಘೋಷಿಸಲಾಗಿದ್ದು, ಕೇಂದ್ರದ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರನ್ನು ಮಹಾರಾಷ್ಟ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.