ಬೆಂಗಳೂರು: ಪಾಕಿಸ್ತಾನದ ಐಎಸ್‌ಐ ಬೆಂಬಲದೊಂದಿಗೆ ಭಾರತದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಆರು ಶಂಕಿತ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಕರ್ನಾಟಕದಲ್ಲೂ ಸ್ಫೋಟಕ್ಕೆ ಸಂಚು ರೂಪಿಸಿದ್ದ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ.

‘ಬೆಂಗಳೂರು ಹಾಗೂ ಮೈಸೂರಿನಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿರುವ ಮಾಹಿತಿ ಇದೆ. ಎರಡೂ ನಗರಗಳಲ್ಲಿ ಕಟ್ಟೆಚ್ಚರ ವಹಿಸಿ’ ಎಂದು ಕೇಂದ್ರ ಗುಪ್ತದಳದ ಅಧಿಕಾರಿಗಳು, ರಾಜ್ಯದ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಓದಿ:ಪಾಕ್ ಉಗ್ರರ ಭಾರಿ ಷಡ್ಯಂತ್ರ ಬಯಲಿಗೆಳೆದ ದೆಹಲಿ ಪೊಲೀಸ್, ಆರು ಮಂದಿ ಸೆರೆ

ಈ ಬಗ್ಗೆ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್, ‘ಭಯೋತ್ಪಾದಕ ಕೃತ್ಯಗಳ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ. ಬೆಂಗಳೂರಿಗೆ ಬರುವ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ನಿಗಾ ಇರಿಸಲಾಗಿದೆ. ಚುರುಕಿನಿಂದ ಗಸ್ತು ತಿರುಗುವಂತೆಯೂ ಠಾಣೆಗಳಿಗೆ ಸೂಚನೆ ನೀಡಲಾಗಿದೆ’ ಎಂದರು.

‘ಉಗ್ರರ ಕೃತ್ಯಗಳನ್ನು ಸಮರ್ಥವಾಗಿ ಎದುರಿಸಲು ಗರುಡ ಪಡೆ ಕಮಾಂಡರ್‌ಗಳು ನಮ್ಮಲ್ಲಿದ್ದಾರೆ. ಅವರೆಲ್ಲರೂ ಶಸ್ತ್ರಸಜ್ಜಿತವಾಗಿ ನಗರದಲ್ಲಿ ಗಸ್ತು ತಿರುಗುತ್ತಿದ್ದಾರೆ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.