ಮದ್ದೂರು: ‘ಬ್ರಾಹ್ಮಣರು ಮುಖ್ಯಮಂತ್ರಿ ಆಗುವುದಾದರೆ ಆಗಲಿ. ಅವರೇಕೆ ಮುಖ್ಯಮಂತ್ರಿಯಾಗಬಾರದು? ಅವರು ಭಾರತದ ಪ್ರಜೆಗಳಲ್ಲವೇ? ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಪ್ರಶ್ನಿಸಿದರು.

ಪಟ್ಟಣದ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಸೋಮವಾರ ಭೇಟಿ ನೀಡಿ ಮಾತನಾಡಿದ ಅವರು, ‘ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಬರುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಹೆಚ್ಚಾಗುತ್ತವೆ. ರಾಜ್ಯದಲ್ಲಿ ಬ್ರಾಹ್ಮಣ ಶಾಸಕರೆಷ್ಟಿದ್ದಾರೆ, ಎಷ್ಟು ಮಂದಿಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿದೆ’ ಎಂದು ಪ್ರಶ್ನಿಸಿದರು.

‘ಬ್ರಾಹ್ಮಣರು ಕಡಿಮೆ ಇದ್ದಾರೆಂಬ ಕಾರಣಕ್ಕೆ ಏನು ಮಾತನಾಡಿದರೂ ನಡೆಯುತ್ತದೆ ಎಂದು ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು‘ ಎಂದು ಪ್ರತಿಪಾದಿಸಿದರು.

‘ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಆತನ ಇಡೀ ಸಮಾಜವನ್ನು ದೂಷಿಸುವುದಾದರೆ, ಇತರೆ ಸಮಾಜದಲ್ಲಿ ನಡೆದ ವಿಚಾರವನ್ನ ಏಕೆ ಸಾಮೂಹಿಕರಣ ಮಾಡುತ್ತಿಲ್ಲ? ಪ್ರಜಾಪ್ರಭುತ್ವದಲ್ಲಿ ಯಾರಿಗೂ ಅನ್ಯಾಯವಾಗಬಾರದು. ಯಾವುದೇ ಧರ್ಮವನ್ನು ದೂಷಿಸುವುದು ಸರಿಯಲ್ಲ. ಯಾರಿಗೂ ಅನ್ಯಾಯವಾಗಬಾರದು‘ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.