ಬೆಂಗಳೂರು: ರಾಜಕೀಯದಲ್ಲಿ ಯಾವುದೇ ಗೊಂದಲ ಇಲ್ಲ. ಯಾರೋ ಒಂದಿಬ್ಬರ ಹೇಳಿಕೆಗಳು ಮಾಧ್ಯಮಗಳ ತಪ್ಪು ಗ್ರಹಿಕೆಗೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಶುಕ್ರವಾರ ಬೆಳಿಗ್ಗೆ ವಿಧಾನಸೌಧದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗುರುವಾರ ಸುಮಾರು 60 ಕ್ಕೂ ಹೆಚ್ಚು ಶಾಸಕರು ಅರುಣ್ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಇವರ ಯಾರ ಮಾತೂ ಹೈಲೈಟ್ ಆಗಿಲ್ಲ. ಆದರೆ, ಒಂದಿಬ್ಬರ ಮಾತು ಮಾತ್ರ ಅನಗತ್ಯ ಪ್ರಚಾರ ಸಿಗುತ್ತಿದೆ ಎಂದು ಹೇಳಿದರು.

ನನ್ನ ವಿರುದ್ಧ ಮಾತನಾಡುವವರನ್ನು ಅರುಣ್ಸಿಂಗ್ ಕರೆಸಿ ಮಾತನಾಡಿಸಿಲ್ಲ. ಯಾವುದೇ ಸಮಸ್ಯೆಗಳು ಇದ್ದರೆ ನೇರವಾಗಿ ಬಂದು ನನ್ನ ಜತೆ ಮಾತನಾಡಬಹುದು. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದೂ ಯಡಿಯೂರಪ್ಪ ತಿಳಿಸಿದರು.

ಯಾವುದೇ ಸಣ್ಣ ಪುಟ್ಟ ಗೊಂದಲಗಳು ಇದ್ದರೆ ಅದನ್ನು ವರಿಷ್ಠರು ಸರಿಪಡಿಸುತ್ತಾರೆ ಎಂದರು.

ಇದನ್ನೂ ಓದಿ... ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸುಲಭವಲ್ಲ: ಸಂಸದ ದೇವೇಂದ್ರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.