ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಮತ್ತೆ ಏರಿಕೆಯಾಗಿರುವುದರಿಂದ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಮತ್ತು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಲಾಕ್‌ಡೌನ್ವಿಧಿಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದಿನಿಂದಲೇ ರಾಜ್ಯದಾದ್ಯಂತ ಈಗಿರುವ ನೈಟ್ ಕರ್ಫ್ಯೂವನ್ನು ರಾತ್ರಿ 9 ಗಂಟೆಯಿಂದ ಮತ್ತು ಕೋವಿಡ್ ಪ್ರಕರಣಗಳು ಹೆಚ್ಚಿರುವ ಮಹಾರಾಷ್ಟ್ರ ಮತ್ತು ಕೇರಳದ ಗಡಿಜಿಲ್ಲೆಗಳಲ್ಲಿವೀಕೆಂಡ್ ಲಾಕ್‌ಡೌನ್ ಜಾರಿಗೆ ಬರಲಿದೆ.

ನೆರೆಯ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್‌ಡೌನ್ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿಯಂತ್ರಣ ಕುರಿತು ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು,' ಶುಕ್ರವಾರದಿಂದಲೇ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಲಾಕ್‌ಡೌನ್ ಜಾರಿಯಾಗಲಿದೆ' ಎಂದರು.

ರಾತ್ರಿ ಕರ್ಫ್ಯೂ ಅವಧಿ ಪರಿಷ್ಕರಿಸಲಾಗಿದೆ. ರಾಜ್ಯದಾದ್ಯಂತ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಒದಿ.. ಆ.23ರಿಂದ 9ನೇ ತರಗತಿಯಿಂದದ್ವಿತೀಯ ಪಿಯುಸಿವರೆಗೆ ತರಗತಿ ಆರಂಭ:ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.