ಬೆಂಗಳೂರು: 'ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, 'ಪಿಎಫ್ಐ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ. ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ' ಎಂದರು.

'ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ. ವಿರೋಧ ಪಕ್ಷದವರೂ, ಸಿಪಿಐ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಕೂಡ ಪಿಎಫ್ಐ ನಿಷೇಧಿಸಬೇಕೆಂದು ಬೇಡಿಕೆ ಇಟ್ಟಿದ್ದರು. ನಿಷೇಧಿತ ಸಂಸ್ಥೆಗಳೊಂದಿಗೆ ಯಾರೂ ಸಂಪರ್ಕ ಅಥವಾ ನಂಟನ್ನು ಇಟ್ಟುಕೊಳ್ಳಬಾರದು' ಎಂದು ಮುಖ್ಯ ಮಂತ್ರಿ ತಿಳಿಸಿದರು.

ಮೈಸೂರು ರಾಜಮನೆತನದ ಪ್ರಮೋದಾದೇವಿ ಎದುರು ಸುಧಾ ಮೂರ್ತಿ ನೆಲಮುಟ್ಟಿದ ಫೋಟೊ ವೈರಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.