ಬೆಂಗಳೂರು: ‘ಶಾಲೆಗಳಲ್ಲಿ ಸೋಮವಾರದಿಂದ (ಆ. 23) ಭೌತಿಕ ತರಗತಿಗಳು ಆರಂಭಗೊಳ್ಳುತ್ತಿದ್ದು, ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು, ‘ಸಚಿವ ಸಂಪುಟದ ಸಹೋದ್ಯೋಗಿಗಳು, ಆಯಾ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು, ಶಿಕ್ಷಕರನ್ನು ಪ್ರೋತ್ಸಾಹಿಸಿ, ಪೋಷಕರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಬೇಕು’ ಎಂದೂ ಸಲಹೆ ನೀಡಿದ್ದಾರೆ.

‘ಮಕ್ಕಳ ಸುರಕ್ಷತೆಯ ಜೊತೆಗೆ ಅವರ ಶೈಕ್ಷಣಿಕ ಭವಿಷ್ಯದ ಹಿತಾಸಕ್ತಿಗಳನ್ನೂ ಪರಿಗಣಿಸಿ, ತಜ್ಞರ ಸಲಹೆಗಳಿಗೆ ಅನುಗುಣವಾಗಿ ಸರ್ಕಾರ ಶಾಲೆಗಳನ್ನು ಆರಂಭಿಸುವ ತೀರ್ಮಾನವನ್ನು ತೆಗೆದುಕೊಂಡಿದೆ. ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು, ಮಾರ್ಗಸೂಚಿ ನಿಯಮಗಳನ್ನು ಪಾಲಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ, ಯಾವುದೇ ಆತಂಕ ಇಲ್ಲದೆ ಸರ್ಕಾರದೊಂದಿಗೆ ಸಹಕರಿಸಬೇಕು’ ಎಂದೂ ಬೊಮ್ಮಾಯಿ ಮನವಿ ಮಾಡಿದ್ದಾರೆ.

ರಾಜ್ಯದಿಂದ ತಮಿಳುನಾಡಿಗೆ ಬಸ್ ಸಂಚಾರ ನಾಳೆಯಿಂದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.