ಬೆಂಗಳೂರು: ‘ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸರ್ಕಾರದೊಂದಿಗೆಸಾರ್ವಜನಿಕರು ಸಹಕರಿಸುವಂತೆ’ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ತೀವ್ರವಾಗುತ್ತಿದೆ. ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ಸಾರ್ವಜನಿಕರ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ’ ಎಂದಿದ್ದಾರೆ.

‘ಮಾಸ್ಕ್ ಧಾರಣೆ, ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ನಮ್ಮ ಜೀವನ ಕ್ರಮವಾಗಲಿ. ಈ ಮುನ್ನೆಚ್ಚರಿಕೆಯ ಕ್ರಮಗಳ ನಿರ್ಲಕ್ಷ್ಯ ಸಲ್ಲದು. ಹಿರಿಯ ನಾಗರಿಕರು, ಇತರ ಆರೋಗ್ಯ ಸಮಸ್ಯೆಯುಳ್ಳ 45ರಿಂದ 60 ವರ್ಷದೊಳಗಿನ ವ್ಯಕ್ತಿಗಳು ತಪ್ಪದೇ ಲಸಿಕೆ ಪಡೆದುಕೊಂಡು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ’ ಎಂದು ಸಲಹೆ ನೀಡಿದ್ದಾರೆ.

ಮುನ್ನೆಚ್ಚರಿಕೆ ಕ್ರಮಗಳ ಪಾಲನೆ ನಿರಂತರವಾಗಿ ಮುಂದುವರಿಯಲಿ. ಸಾರ್ವಜನಿಕ ಸ್ಥಳಗಳಲ್ಲಿ ಈ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ ನಮ್ಮ ಜವಾಬ್ದಾರಿಯನ್ನು ನಿರ್ವಹಿಸೋಣ, ಕೋವಿಡ್–19 ನಿಯಂತ್ರಿಸೋಣ ಎಂದಿದ್ದಾರೆ.

ಜೀವ–ಜೀವನೋಪಾಯಗಳ ಸಮತೋಲನ ಕಾಪಾಡುವ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿರ್ವಹಿಸೋಣ, ಮುನ್ನೆಚ್ಚರಿಕೆಯೊಂದಿಗೆ ಮುನ್ನಡೆಯೋಣ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ... ಪ್ರಸಿದ್ಧ ಕೃಷ್ಣಗೆ ಒಲಿದ ಅದೃಷ್ಟ; ಮನೀಶ್ ಪಾಂಡೆಗೆ ಮುಚ್ಚಿದ ಬಾಗಿಲು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.