ಬೆಂಗಳೂರು: ಮಂಗಳೂರು ನಗರದ ಗರೋಡಿಯಲ್ಲಿ ಶನಿವಾರ ಸಂಭವಿಸಿದ ಲಘು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಗೃಹ ಇಲಾಖೆಯ ವೈಫಲ್ಯ ಎತ್ತಿ ತೋರಿಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸ್ಫೋಟ ಪ್ರಕರಣ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಮಂಗಳೂರಿನಲ್ಲಿಸಂಭವಿಸಿರುವ ಸ್ಫೋಟ ಪ್ರಕರಣ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಸಾರ್ವಜನಿಕರು ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ಕೇಳಿಕೊಳ್ಳುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.

‘ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಭಯೋತ್ಪಾದಕ ಕೃತ್ಯ ಎಂದು ದೃಢೀಕರಿಸಿರುವ ಮಂಗಳೂರು ನಗರದ ಸ್ಫೋಟದ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಓದಿ...ಮಂಗಳೂರು: ಆಟೋರಿಕ್ಷಾದಲ್ಲಿ ಸ್ಫೋಟ ಭಯೋತ್ಪಾದನೆ ಕೃತ್ಯ -ಡಿಜಿಪಿ ಪ್ರವೀಣ್ ಸೂದ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.