ಬೆಂಗಳೂರು: ‘ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಿರುವುದನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ’ ಎಂದು ಬರೆದುಕೊಂಡಿದ್ದಾರೆ.

‘ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲವಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ’ ಎಂದು ಹೇಳಿದ್ದಾರೆ.

‘ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ ಸ್ಪೂರ್ತಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ’ ಎಂದು ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿದ್ದಾರೆ.

‘ಕೃಷಿಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ₹25 ಲಕ್ಷ ಪರಿಹಾರ ಕೊಡಬೇಕು’ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ... ಮೂರೂ ಕೃಷಿ ಕಾಯ್ದೆಗಳು ರದ್ದು: ಪ್ರಧಾನಿ ನರೇಂದ್ರ ಮೋದಿ ಘೋಷಣೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.