ಬೆಂಗಳೂರು: ‘ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ರೋಗವನ್ನು ಅಧಿಕೃತ ರೋಗಗಳ ಪಟ್ಟಿಯಲ್ಲಿ ಸೇರಿಸಿ, ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

‘ಪ್ರತಿವಾರ ಸುಮಾರು 400 ಜನಕ್ಕೆ ಈ ಸೋಂಕು ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಈಗಾಗಾಲೇ ಬಹಳಷ್ಟು ಜನರು ಈ ರೋಗಕ್ಕೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಈ ರೋಗವು ಇನ್ನಷ್ಟು ಜೀವಗಳನ್ನು ಹೊತ್ತೊಯ್ಯುವ ಮೊದಲು ಉಚಿತ ಚಿಕಿತ್ಸೆ ನೀಡಲು ಆರಂಭಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಮಧುಮೇಹ ಮುಂತಾದ ಸಮಸ್ಯೆ ಇದ್ದು ಕೋವಿಡ್ ಬಂದವರನ್ನು ಕನಿಷ್ಟ ಮೂರು ತಿಂಗಳ ಕಾಲ ಗಮನಿಸುತ್ತಿರಬೇಕು. ಜೊತೆಗೆ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ವಿವರಗಳನ್ನು ಮತ್ತು ಹೆಚ್ಚು ಸ್ಟಿರಾಯ್ಡ್ ನೀಡಲಾಗಿರುವವರ ಪಟ್ಟಿಯನ್ನು ತಾಲ್ಲೂಕುವಾರು, ವಾರ್ಡ್‍ವಾರು ಸಿದ್ಧಪಡಿಸಿಕೊಂಡು ಅವರನ್ನೂ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ನಿಗಾ ವಹಿಸಬೇಕು. ಈ ನಿಗಾ ಅವಧಿಯಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕೂಡಲೇ ಚಿಕಿತ್ಸೆ ನೀಡಬೇಕು. ಅದಕ್ಕೂ ಮೊದಲು, ಈ ರೋಗಕ್ಕೆ ಚಿಕಿತ್ಸೆ ನೀಡಲು ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿ, ಅಧಿಸೂಚನೆ ಹೊರಡಿಸಬೇಕು’ ಎಂದಿದ್ದಾರೆ.

’ಕಪ್ಪು ಶಿಲೀಂಧ್ರ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್ ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಮಾರುಕಟ್ಟೆಯಲಿ ಈ ಔಷಧ ಸಿಗುತ್ತಿಲ್ಲ. ಒಂದೊಂದು ಇಂಜೆಕ್ಷನ್ ಬೆಲೆ ಕಾಳಸಂತೆಯಲ್ಲಿ ಈಗಾಗಲೇ ₹ 5 ಸಾವಿರದಿಂದ ₹ 7 ಸಾವಿರಕ್ಕೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ, ಕಪ್ಪು ಶಿಲೀಂಧ್ರ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್ಲ’ ಎಂದು ದೂರಿದ್ದಾರೆ

‘ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ. ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ, ಏಕೆ ಹರಡುತ್ತಿದೆ, ಯಾವಾಗ ಹರಡುತ್ತಿದೆ, ರೋಗ ಲಕ್ಷಣಗಳೇನು, ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು, ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು, ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು, ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿ ಹೊರಡಿಸಬೇಕು’ ಎಂದೂ ಆಗ್ರಹಿಸಿದ್ದಾರೆ.

ಕೊರೊನಾ ಸೋಂಕಿತರನ್ನು ಸದ್ದಿಲ್ಲದೇ ಬಲಿಪಡೆಯುತ್ತಿದೆ 'ಹ್ಯಾಪಿ ಹೈಪೋಕ್ಸಿಯಾ'

‘ಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಈ ರೋಗದ ವಿಚಾರದಲ್ಲಿ ನಡೆದುಕೊಳ್ಳಬಾರದು. ಉತ್ತರ ಭಾರತದ ಅನೇಕ ಕಡೆ ಸಗಣಿ ಬಳಸಿ ಚಿಕಿತ್ಸೆ ಪಡೆಯಲು ಹೊರಟವರಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ. ಬಹುತೇಕ ವೈದ್ಯರು ಕೋವಿಡ್ ಚಿಕಿತ್ಸೆಯಲ್ಲಿ ಅನಿಯಮಿತವಾಗಿ ಬಳಸುವ ಸ್ಟಿರಾಯ್ಡಿಗಳಿಂದ ಹರಡುತ್ತಿದೆ ಎನ್ನುತ್ತಾರೆ. ಕೋವಿಡ್ ಬಂದವರಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಸುಲಭವಾಗಿ ಹರಡುತ್ತದೆ ಎನ್ನಲಾಗುತ್ತಿದೆ. ಆಕ್ಸಿಜನ್ ನೀಡುವಾಗ ಉಂಟಾಗುವ ಸೋಂಕುಗಳಿಂದ ಹರಡುತ್ತದೆ ಎಂಬ ಅಭಿಪ್ರಾಯವೂ ಇದೆ. ಆದ್ದರಿಂದ ಈ ಕುರಿತು ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು’ ಎಂದೂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬ್ಲ್ಯಾಕ್ ಫಂಗಸ್: ತಜ್ಞರ ಸಮಿತಿ ರಚನೆ –ಆರೋಗ್ಯ ಸಚಿವ ಸುಧಾಕರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.